ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ದೇಣಿಗೆ ನೀಡಿದ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ 9,99,999 ರೂಪಾಯಿಗಳ ದೇಣಿಗೆ ನೀಡಿದ್ದಾರೆ. ಈ ದೇಣಿಗೆಯನ್ನು ಅವರ ಪತ್ನಿ ಉಷಾ ಶಿವಕುಮಾರ್ ಅವರ ಹೆಸರಿನಲ್ಲಿ ನೀಡಲಾಗಿದೆ. ಹೊಸ ದೇವಸ್ಥಾನ ನಿರ್ಮಾಣಕ್ಕೆ ಈ ದೇಣಿಗೆ ಸಹಾಯಕವಾಗಲಿದೆ ಎಂದು ಹೇಳಲಾಗಿದೆ.
ಉಡುಪಿ, ಮಾರ್ಚ್ 02: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಕಾಪು ಹೊಸ ಮಾರಿಗುಡಿಗೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದು, ಪತ್ನಿ ಉಷಾ ಹೆಸರಿನಲ್ಲಿ 9,99,999 ರೂ. ದೇಣಿಗೆ ನೀಡಿದ್ದಾರೆ. ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಡಿಕೆ ಶಿವಕುಮಾರ್ ದೇಣಿಗೆ ನೀಡಿದ್ದಾರೆ. ಹತ್ತು ದಿನಗಳ ಕಾಲ ಮಾರಿಯಮ್ಮನ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.