ಸಾಧನಾ ಸಮಾವೇಶದಿಂದ ವಾಪಸ್ ಬರುತ್ತಿದ್ದ ಡಿಕೆ ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನವು ಮೈಸೂರಿನಿಂದ ಬೆಂಗಳೂರಿಗೆ ಹೋಗುವಾಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಪಲ್ಟಿಯಾಗಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ.
ಮಂಡ್ಯ, ಜುಲೈ 19: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಬೆಂಗಾವಲು ವಾಹನ (Escort vehicle) ಪಲ್ಟಿಯಾಗಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಘಟನೆ ನಡೆದಿದೆ. ಬೆಂಗಾವಲು ವಾಹನ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಬೆಂಗಾವಲು ವಾಹನದಲ್ಲಿದ್ದ ಇಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Published on: Jul 19, 2025 03:35 PM
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
