5 ಕೋಟಿ ಆಫರ್ ನೀಡಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಒಡಿಶಾ ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬೆಂಗಳೂರಿನಲ್ಲಿ ಹಿಡಿಯಲಾಗಿದೆ. ಅಪರಿಚಿತ ವ್ಯಕ್ತಿಗಳು ಶಾಸಕರೊಬ್ಬರಿಗೆ ಐದು ಕೋಟಿ ರೂಪಾಯಿ ಮತ್ತು ಖಾಲಿ ಚೆಕ್‌ಗಳ ಆಮಿಷ ಒಡ್ಡಿದ್ದರು. ಡಿಕೆ ಶಿವಕುಮಾರ್ ಈ ಘಟನೆಯನ್ನು ಆಪರೇಷನ್ ಕಮಲ ಎಂದು ಬಣ್ಣಿಸಿದ್ದು, ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 15: ನಗರದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಶಾಸಕರನ್ನು ಅಪರಿಚಿತ ವ್ಯಕ್ತಿಗಳು ಖರೀದಿಸಲು ಪ್ರಯತ್ನಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಗೆ ಮುನ್ನ ನಡೆದ ಈ ಘಟನೆಯಲ್ಲಿ ಶಾಸಕರಿಗೆ ಐದು ಕೋಟಿ ರೂಪಾಯಿ ಮತ್ತು ಖಾಲಿ ಚೆಕ್‌ಗಳ ಆಮಿಷ ಒಡ್ಡಲಾಗಿತ್ತು. ಬೈತರಾಯನಪುರದ ಸುರೇಶ್ ಎಂಬುವರ ಸಹಾಯದಿಂದ ಆನ್‌ಲೈನ್‌ನಲ್ಲಿ ರೆಸಾರ್ಟ್‌ನಲ್ಲಿ ಕೊಠಡಿ ಕಾಯ್ದಿರಿಸಿ ಈ ವ್ಯಕ್ತಿಗಳು ಶಾಸಕರನ್ನು ಭೇಟಿ ಮಾಡಿದ್ದರು. ಶಾಸಕರು ಈ ಪ್ರಸ್ತಾಪವನ್ನು ತಿರಸ್ಕರಿಸಿ ಪಕ್ಷಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಕಾಂಗ್ರೆಸ್ ಮುಖಂಡರು ನಾಲ್ವರಲ್ಲಿ ಇಬ್ಬರನ್ನು ಹಿಡಿದಿದ್ದು, ಉಳಿದ ಇಬ್ಬರು ಪರಾರಿಯಾಗಿದ್ದಾರೆ. ಸಿಕ್ಕಿಬಿದ್ದ ವ್ಯಕ್ತಿಗಳು ತಮ್ಮ ಉದ್ದೇಶವನ್ನು ಒಪ್ಪಿಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮಕ್ಕೆ ದೂರು ದಾಖಲಿಸಲಾಗಿದೆ ಎಂದು ಡಿಕೆಶಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
