ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್​​​ಗೆ ಅಧಿಕೃತ ಪಟ್ಟಾಭಿಷೇಕ

Updated on: Jun 21, 2026 | 3:38 PM

ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಇಂದು (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್​​​ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೆಪಿಸಿಸಿ ಪಟ್ಟಾಭಿಷೇಕ ಮಾಡಲಾಯ್ತು.

ಬೆಂಗಳೂರು, (ಜೂನ್ 21): ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಇಂದು (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್​​​ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೆಪಿಸಿಸಿ ಪಟ್ಟಾಭಿಷೇಕ ಮಾಡಲಾಯ್ತು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಹಿರಿಯ ಕಾರ್ಯಕರ್ತ ಹರಿಪ್ರಸಾದ್​ಗೆ ಅಧಿಕಾರ ಹಸ್ತಾಂತರಿಸಿದ್ದೇನೆ. ಕಾಂಗ್ರೆಸ್​ ಶಕ್ತಿ ಈ ದೇಶದ ಶಕ್ತಿ . ಶಕ್ತಿ ಮೀರಿ ನನ್ನ ಕಾರ್ಯಕರ್ತರಿಗೆ ಸೇವೆ ಮಾಡಿದ್ದೇನೆ ಸೋನಿಯಾ ಗಾಂಧಿಯವರ ಆಶೀರ್ವಾದ ನಾನು ಮರೆಯುವುದಿಲ್ಲ. ಕೊವಿಡ್ ಸಂದರ್ಭದಲ್ಲೂ ಮೇಕೆದಾಟು ಪಾದಯಾತ್ರೆ ಮಾಡಿದ್ದೆವು.ಕೇವಲ ಸಿದ್ದರಾಮಯ್ಯ ಹಾಗೂ ನನ್ನಿಂದ 136 ಸೀಟ್​ಗಳನ್ನ​ ಗೆದ್ದಿಲ್ಲ. ನಿಮ್ಮೆಲ್ಲರ ಶಕ್ತಿಯಿಂದ 136 ಸೀಟ್​ಗಳನ್ನು ಗೆಲ್ಲಲು ಸಾಧ್ಯವಾಯ್ತು ಎಂದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More