Karnataka Assembly Polls: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ತುರ್ತು ಚುಟುಕು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

Updated on: Apr 29, 2023 | 12:07 PM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಅಗಮಿಸಿರುವುದು ಕಾಂಗ್ರೆಸ್ ಶಿಬಿರದಲ್ಲಿ ಅತಂಕ ಮೂಡಿಸಿದೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಇಂದು ಬೆಳಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನಿವಾಸಕ್ಕೆ ತೆರಳಿ ಒಂದು ಚುಟುಕು ಸಭೆಯನ್ನು ನಡೆಸಿದರು. ಇಬ್ಬರ ಮನೆಗಳು ನಗರದ ಸದಾಶಿವನಗರದಲ್ಲಿವೆ. ಖರ್ಗೆಯವರ ಮನೆಗೆ ಯಾವ ವಿಷಯ ಚರ್ಚಿಸಲು ಶಿವಕುಮಾರ್ ಅಗಮಿಸಿದ್ದರು ಅನ್ನೋದು ಗೊತ್ತಾಗಲಿಲ್ಲ. ಪತ್ರಕರ್ತರರೊಬ್ಬರು ಕೇಳಿದಾಗ ತಿಂಡಿ ತಿನ್ನಲು ಹೋಗುತ್ತಿರುವುದಾಗಿ ಶಿವಕುಮಾರ್ ಹೇಳಿದರು. ಆದರೆ ಭೇಟಿಯ ಕಾರಣ ಶಿವಕುಮಾರ್ ಹೇಳಿದಷ್ಟು ಸರಳವಾಗಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಅಗಮಿಸಿರುವುದು ಕಾಂಗ್ರೆಸ್ ಶಿಬಿರದಲ್ಲಿ ಅತಂಕ ಮೂಡಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More