AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಪ್ರಸನ್ನ ಗಾಂವ್ಕರ್​
| Edited By: |

Updated on:Jul 14, 2026 | 7:00 PM

Share

Karnataka Politics: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ್ದು, ಮೀಟಿಂಗ್​​ಗೆ ಪ್ರಮುಖ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಗೈರು ಹಾಜರಾಗಿದ್ದಾರೆ. ಗೈರಿನ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬರುತ್ತಿದ್ದು, ನಾಯಕರ ಮುನಿಸು ಮುಂದುವರಿದಿದ್ಯಾ ಎಂಬ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸಿವೆ.

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್​​ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್​​ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಸಿಗದ ಕುರಿತು ಮೊದಲಿನಿಂದಲೂ ಅಸಮಾಧಾನವಿತ್ತು. ನಂತರ ಅವರನ್ನು ಮನವೊಲಿಸಲಾಗಿದ್ದರೂ, ಇಂದಿನ ಸಭೆಗೆ ಅವರು ಹಾಜರಾಗದಿರುವುದು ಆ ಮುನಿಸು ಇನ್ನೂ ತಣ್ಣಗಾಗಿಲ್ಲವಾ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 14, 2026 06:58 PM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More