Assembly Polls: ಸಿದ್ದರಾಮಯ್ಯ ಮತ್ತು ಇತರ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಡಿಕೆ ಶಿವಕುಮಾರ್

Assembly Polls: ಸಿದ್ದರಾಮಯ್ಯ ಮತ್ತು ಇತರ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 23, 2023 | 12:23 PM

ವಾರದ ಮೊದಲ ದಿನವಾದ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರನ್ನು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಕರೆಸಿ ಒಂದು ಸಭೆ ನಡೆಸಿದರು

ಬೆಂಗಳೂರು:  ಕರ್ನಾಟಕ ಕಾಂಗ್ರೆಸ್ ನಾಯಕರು ದಿನೇದಿನೆ ಹತ್ತಿರವಾಗುತ್ತಿರುವ ವಿಧಾನ ಸಭಾ ಚುನಾವಣೆಗೆ ಜೋರಾಗಿ ತಯಾರಿಗಳನ್ನು ನಡೆಸಿದ್ದಾರೆ. ಪ್ರಜಾಧ್ವನಿ (Prajadhvani) ಯಾತ್ರೆಯ ಮೂಲಕ ಪಕ್ಷದ ನಾಯಕರು ರಾಜ್ಯವನ್ನು ಸುತ್ತುತ್ತಿರುವ ಸಂಗತಿ ನಿಮಗೆ ಗೊತ್ತಿದೆ. ವಾರದ ಮೊದಲ ದಿನವಾದ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಸಿದ್ದರಾಮಯ್ಯ (Siddaramaiah) ಸೇರಿದಂತೆ ಪ್ರಮುಖ ನಾಯಕರನ್ನು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಕರೆಸಿ ಒಂದು ಸಭೆಯನ್ನು ನಡೆಸಿದರು. ಸಭೆಯಲ್ಲಿ ಯಾವೆಲ್ಲ ವಿಷಯಗಳು ಚರ್ಚೆಯಾದವೆಂಬ ಮಾಹಿತಿ ನಮಗೆ ಸಿಕ್ಕಿಲ್ಲ ಆದರೆ, ದಿನದ ಮತ್ತು ವಾರದ ಉಳಿದ ದಿನಗಳ ಕಾರ್ಯಕ್ರಮಗಳ ರೂಪುರೇಷೆಯನ್ನು ಅವರು ಚರ್ಚಿಸಿರಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ