AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶವಂತಪುರ ಎಪಿಎಂಸಿಗೆ ಸಿಎಂ ಭೇಟಿ: ಖುದ್ದು ಆಲೂಗಡ್ಡೆ ಕತ್ತರಿಸಿ ಪರಿಶೀಲನೆ ನಡೆಸಿದ ಡಿಕೆ ಶಿವಕುಮಾರ್​

ಯಶವಂತಪುರ ಎಪಿಎಂಸಿಗೆ ಸಿಎಂ ಭೇಟಿ: ಖುದ್ದು ಆಲೂಗಡ್ಡೆ ಕತ್ತರಿಸಿ ಪರಿಶೀಲನೆ ನಡೆಸಿದ ಡಿಕೆ ಶಿವಕುಮಾರ್​

ಶಿವಪ್ರಸಾದ್​ ಬಿ.
| Edited By: |

Updated on:Sep 08, 2026 | 11:41 AM

Share

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ, ಆಲೂಗಡ್ಡೆ ಬೆಳೆ ಬೆಳೆದಿರುವ ರೈತರೊಂದಿಗೆ ಸಂವಾದ ನಡೆಸಿದರು. ಮಳೆಯ ಅಭಾವದಿಂದ ಇಳುವರಿ ಕುಂಠಿತ, ಕೀಟಬಾಧೆ ಹಾಗೂ ಸ್ಥಳೀಯ ಆಲೂಗಡ್ಡೆಗೆ ಕಡಿಮೆ ಬೆಲೆ ಸಿಗುತ್ತಿರುವ ಬಗ್ಗೆ ರೈತರು ತಮ್ಮ ಅಳಲು ತೋಡಿಕೊಂಡರು. ಇದರಿಂದ ಬಂಡವಾಳವೂ ವಾಪಸ್ ಬರುತ್ತಿಲ್ಲ ಎಂದು ರೈತರು ಸಿಎಂಗೆ ವಿವರಿಸಿದರು.

ಬೆಂಗಳೂರು, ಸೆಪ್ಟೆಂಬರ್​​ 08: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಲೂಗಡ್ಡೆ ಬೆಳೆಗಾರರ ಸಮಸ್ಯೆ ಆಲಿಸಿದ ಸಿಎಂ, ವ್ಯಾಪಾರಿಗಳೊಂದಿಗೂ ಸಂವಾದ ನಡೆಸಿದ್ದಾರೆ. ರೈತರು ತಮ್ಮ ಆಲೂಗಡ್ಡೆ ಬೆಳೆಗೆ ಎದುರಾಗಿರುವ ಸಂಕಷ್ಟಗಳನ್ನು ಸಿಎಂಗೆ ವಿವರಿಸಿದ್ದು, ಮಳೆಯ ಅಭಾವದಿಂದಾಗಿ ಈ ವರ್ಷ ಇಳುವರಿ ಗಣನೀಯವಾಗಿ ಕಡಿಮೆಯಾಗಿದೆ. ಸಕಾಲಕ್ಕೆ ಮಳೆಯಾಗದೆ ಮೂರು ತಿಂಗಳಾಯಿತೆಂದು ನೋವಿನ ಮಾತುಗಳನ್ನಾಡಿದ್ದಾರೆ. ಖುದ್ದಾಗಿ ಹಸಿ ಆಲೂಗಡ್ಡೆಯನ್ನು ತಿಂದು ಮುಖ್ಯಮಂತ್ರಿಗಳು ಗುಣಮಟ್ಟದ ಪರಿಶೀಲಿಸಿದ ಪ್ರಸಂಗವೂ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 08, 2026 11:22 AM

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More