‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘: ಸಿಎಂರನ್ನ ಹಾಡಿ ಹೊಗಳಿದ ಬಿಜೆಪಿ ನಾಯಕ
ಬಿಜೆಪಿ ನಾಯಕ ಹೆಚ್ಎಂ ವಿಶ್ವನಾಥ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂರು ದಿನಗಳ ಕಾರ್ಯವೈಖರಿ ಮತ್ತು ನಾಯಕತ್ವವನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಕಸ್ತೂರಿ ರಂಗನ್ ವರದಿ, ಮಲ್ನಾಡ್ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಅವರೇ 100 ತಿಂಗಳು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಆಶಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಹಾಸನ, ಸೆಪ್ಟೆಂಬರ್ 20: ‘ಸಿಎಂ ಡಿಕೆ ಶಿವಕುಮಾರ್ ಅವರು ಕೇವಲ ನೂರು ದಿನಗಳಲ್ಲಿ ರಾಜ್ಯದಲ್ಲಿ ಭರವಸೆ ಮೂಡಿಸಿದ್ದಾರೆ. ಅವರಿಗೆ 18 ತಿಂಗಳು ಸಾಕಾಗುವುದಿಲ್ಲ, ನೂರು ತಿಂಗಳ ಕಾಲ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು’ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಹೆಚ್ಎಂ ವಿಶ್ವನಾಥ್ ಹಾಡಿ ಹೊಗಳಿದ್ದಾರೆ. ನಗರದಲ್ಲಿ ನಡೆದ ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ಜನರೊಂದಿಗೆ ಸಿಎಂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವತಂತ್ರ ಭಾರತದಲ್ಲಿ ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯರು. ಇದೇ ನಾಯಕತ್ವ ಮುಂದುವರೆದರೆ ನಮ್ಮ ಬೆಂಬಲ ಇರಲಿದೆ’ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

