DK Shivakumar: ವಿರೋಧ ಪಕ್ಷದ ಶಾಸಕರನ್ನು ಸಭೆಗೆ ಕರೆದ ಡಿಕೆ ಶಿವಕುಮಾರ್ ಖುದ್ದು ನಾಪತ್ತೆ, ಬೇಸರಿಸಿಕೊಂಡು ಹೊರಬಿದ್ದ ಬಿಜೆಪಿ ಶಾಸಕರು!

ಅರುಣ್​ ಕುಮಾರ್​ ಬೆಳ್ಳಿ

Updated on: Jun 05, 2023 | 1:43 PM

ಶಾಸಕರು ಹೊರಡುವ ಮೊದಲು ಮಾಧ್ಯಮ ಪ್ರತಿನಿಧಿಗಳ ಮುಂದೆ ತಮ್ಮ ಅಸಹನೆಯನ್ನು ಬಹಿರಂಗಪಡಿಸಿದರು.

ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಷಯಗಳನ್ನು ಚರ್ಚಿಸಲು  ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ವಿರೋಧ ಪಕ್ಷದ ಶಾಸಕರೂ ಸೇರಿದಂತೆ ನಗರದ ಎಲ್ಲ ಶಾಸಕರನ್ನು ಇಂದು ಸಭೆಗೆ ಆಹ್ವಾನಿಸಿದ್ದರು. ಸಭೆ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್ ನಲ್ಲಿ ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಿತ್ತು. ಆದರೆ ಸಮಯ 12 ಮೀರಿದರೂ ಶಿವಕುಮಾರ್ ಸಭೆಗೆ ಬರಲಿಲ್ಲ. ಕಾಯ್ದು ಕಾಯ್ದು ಬೇಸತ್ತ ಬಿಜೆಪಿ ಶಾಸಕರಾದ ಬೈರತಿ ಬಸವರಾಜ (Byrathi Basavaraj), ಎಸ್ ಟಿ ಸೋಮಶೇಖರ್ (ST Somashekar), ಮತ್ತು ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಬೇಸರ ಮಾಡಿಕೊಂಡು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಾ ಅಲ್ಲಿಂದ ಹೊರಟರು. ಹೊರಡುವ ಮೊದಲು ಮಾಧ್ಯಮ ಪ್ರತಿನಿಧಿಗಳ ಮುಂದೆ ತಮ್ಮ ಅಸಹನೆಯನ್ನು ಬಹಿರಂಗಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.