ನಾನು ಈ ಮಟ್ಟಕ್ಕೆ ಬೆಳೆಯಲು ಡಿಕೆ ಶಿವಕುಮಾರ್ ಕಾರಣ: ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್

Edited By: Rakesh Nayak Manchi

Updated on: Aug 14, 2023 | 6:36 PM

ಕೆಂಪೇಗೌಡ ಬಡಾವಣೆ ವೀಕ್ಷಣೆ ಮಾಡಿದ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದರು. ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರು ಡಿ.ಕೆ.ಶಿವಕುಮಾರ್​ ಕಾರಣ ಎಂದು ಹೇಳಿದರು.

ಬೆಂಗಳೂರು, ಆಗಸ್ಟ್ 14: ನಾನು ಈ ಮಟ್ಟಕ್ಕೆ ಬೆಳೆಯಲು ನೂರಕ್ಕೆ ನೂರರಷ್ಟು ಡಿ.ಕೆ.ಶಿವಕುಮಾರ್ (D.K.Shivakumar) ಕಾರಣ ಎಂದು ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್ (S.T.Somashekhar) ಹೇಳಿದ್ದಾರೆ. ಕೆಂಪೇಗೌಡ ಬಡಾವಣೆ ವೀಕ್ಷಣೆ ವೇಳೆ ಡಿಸಿಎಂ ಅವರನ್ನು ಹೊಗರಳಿದ ಸೋಮಶೇಖರ್, ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರು ಡಿ.ಕೆ.ಶಿವಕುಮಾರ್​ ಕಾರಣ. ಉತ್ತರಹಳ್ಳಿ ಕ್ಷೇತ್ರದ ಶಾಸಕ ಆಗಬೇಕೆಂದು ನನ್ನ ಹೆಸರು ಘೋಷಿಸಿದ್ದರು. ಆಗ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು ಡಿ.ಕೆ.ಶಿವಕುಮಾರ್​. ಅವರ ಶ್ರಮದಿಂದ ನಾನು ಇಂತಹ ವೇದಿಕೆಯಲ್ಲಿ ಮಾತನಾಡುತ್ತಿದ್ದೇನೆ. ಡಿ.ಕೆ.ಶಿವಕುಮಾರ್​ ಮೇಲೆ ಬೆಂಗಳೂರಿನ ಜನ ವಿಶ್ವಾಸ ಇಟ್ಟಿದ್ದಾರೆ. ಅದರಂತೆ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Aug 14, 2023 06:35 PM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More