ರಾಜೀನಾಮೆ ನೀಡುತ್ತೇವೆಂದ ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

Updated on: Aug 04, 2026 | 12:31 PM

ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ನೀಡಲು ಮುಂದಾದರೆ ತಕ್ಷಣ ಅಂಗೀಕಾರ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಪ್ರಾಮುಖ್ಯತೆ ನೀಡುವಂತೆ ಕರೆ ನೀಡಿದ ಅವರು, ಬರ ಪರಿಹಾರ ಕಾರ್ಯಗಳತ್ತ ಗಮನಹರಿಸಲು ಸಚಿವರು ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜೀನಾಮೆ ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು ಆ. 4: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೇ ಸಚಿವ ಸ್ಥಾನ ಕೈತಪ್ಪಿ ಅಸಮಾಧಾನಗೊಂಡಿರುವ ಹಾಗೂ ರಾಜೀನಾಮೆ ನೀಡುತ್ತೇವೆ ಎಂದು ಹೇಳಿಕೆ ನೀಡುತ್ತಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಶಿಸ್ತು ಮೀರಿ ರಾಜೀನಾಮೆ ನಾಟಕವಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ಹೇಳಿದ್ದಾರೆ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ನೀಡಲು ಬಂದರೆ, ಕಿಂಚಿತ್ತೂ ವಿಳಂಬ ಮಾಡದೆ ಕ್ಷಣಮಾತ್ರದಲ್ಲೇ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗುವುದು ಎಂದು ಸಿಎಂ ಹಾಕಿದ್ದಾರೆ. ಸರ್ಕಾರ ಅಥವಾ ಪಕ್ಷಕ್ಕೆ ರಾಜೀನಾಮೆ ಬೆದರಿಕೆ ಒಡ್ಡುವ ಮೂಲಕ ಒತ್ತಡ ಹೇರಲು ಯತ್ನಿಸುವವರ ತಂತ್ರಗಳಿಗೆ ಹೈಕಮಾಂಡ್ ಅಥವಾ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಎಲ್ಲರಿಗೂ ಒಂದೇ ಬಾರಿಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹಿರಿಯರು ಹಾಗೂ ಆಕಾಂಕ್ಷಿಗಳು ತಾಳ್ಮೆಯಿಂದಿರಬೇಕು. ಪಕ್ಷದ ನಿಯಮ ಮತ್ತು ಶಿಸ್ತನ್ನು ಮೀರಿ ನಡೆಯುವವರನ್ನು ಸಹಿಸುವುದಿಲ್ಲ ಎಂದು ಸಿಎಂ ಖಡಕ್ ಆಗಿ ಎಚ್ಚರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 04, 2026 11:45 AM
Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More