ಡಿಕೆ ಶಿವಕುಮಾರ್ ನವೆಂಬರ್‌ನಲ್ಲಿ ಸಿಎಂ ಆಗ್ತಾರೆ: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ತಂದ ಮಾಜಿ ಸಂಸದ ಶಿವರಾಮೇಗೌಡ
ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರುವ ಕುರಿತು ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ. ನವೆಂಬರ್‌ನಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಈ ಹೇಳಿಕೆಯನ್ನು ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನೀಡಿದ್ದು, ಹೈಕಮಾಂಡ್‌ನ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ.
ಮಂಡ್ಯ, ಅಕ್ಟೋಬರ್ 1: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್‌ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಸಿಎಂ ಆಗಲಿದ್ದಾರೆ. ಅವರು ಮುಖ್ಯಮಂತ್ರಿ ಅಗಬೇಕು ಎಂಬುದೇ ನಮ್ಮ ಇಚ್ಛೆ ಎಂದು ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ. ಆದರೆ, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಹಳೆಮೈಸೂರು ಭಾಗದವರಾದ ನಮ್ಮೆಲ್ಲರ ಇಚ್ಛೆ. ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದರು.
Latest Videos
