ಕರ್ನಾಟಕ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್

Updated on: May 30, 2026 | 2:00 PM

ಕರ್ನಾಟಕ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಅಜ್ಜಯ್ಯನವರ ಸಲಹೆ ಹಾಗೂ ಶುಭ ಮುಹೂರ್ತದ ಮೇರೆಗೆ ಈ ದಿನಾಂಕ ನಿಗದಿಪಡಿಸಲಾಗಿದೆ. 12 ರಿಂದ 14 ಸಚಿವರು ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಬೆಂಗಳೂರು, ಮೇ 30: ಡಿಕೆ ಶಿವಕುಮಾರ್ ಜೂನ್ 3 ರಂದು ಲೋಕಭವನದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ ಎಂಬುದು ತಿಳಿದುಬಂದಿದೆ. ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಆಧಾರದ ಮೇಲೆ ಈ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ರಾಜ್ಯಪಾಲರನ್ನು ಬೆಳಗ್ಗೆ ಭೇಟಿ ಮಾಡಿದ ನಂತರ, ಡಿ ಕೆ ಶಿವಕುಮಾರ್ ಅವರು ನಾಗರಭಾವಿಯಲ್ಲಿರುವ ಶಾಖಾಮಠಕ್ಕೆ ಭೇಟಿ ನೀಡಿ ಅಜ್ಜಯ್ಯನವರ ಆಶೀರ್ವಾದ ಪಡೆದರು. ಸಿಎಲ್‌ಪಿ ಸಭೆ ಸಂಜೆ 4 ಗಂಟೆಗೆ ನಡೆಯಲಿದ್ದು, ಅದರಲ್ಲಿ ಡಿಕೆ ಶಿವಕುಮಾರ್ ಅವರನ್ನು ಅಧಿಕೃತವಾಗಿ ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಡಿಕೆ ಶಿವಕುಮಾರ್ ಅವರೊಂದಿಗೆ 12 ರಿಂದ 14 ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 30, 2026 01:49 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More