ಮಲ್ಲಿಕಾರ್ಜುನ ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ನೀಡಿದ ಮಾಹಿತಿ ಇಲ್ಲಿದೆ

Edited By:

Updated on: Sep 27, 2026 | 12:55 PM

ಸಿಎಂ ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮತದಾರರ ಪಟ್ಟಿ ಅಕ್ರಮಗಳ ಕುರಿತು ಚರ್ಚಿಸಿದರು. ಚುನಾವಣೆಗಳು ಅಕ್ರಮವಾಗಿ ನಡೆದಿವೆ ಎಂಬುದಕ್ಕೆ ಸಾಕ್ಷಿ ಸಿಗುತ್ತಿದೆ ಎಂದು ತಿಳಿಸಿದ ಶಿವಕುಮಾರ್, ಈ ಬಗ್ಗೆ ನಾಡಿದ್ದು ಚರ್ಚೆ ನಡೆಸಿ ನಂತರ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದರು. ನಿಗಮ ಮಂಡಳಿ, ಹಿರಿಯ ಶಾಸಕರು ಮತ್ತು ಕಾರ್ಯಕರ್ತರ ಸೌಕರ್ಯದ ಬಗ್ಗೆಯೂ ದೆಹಲಿಯಲ್ಲಿ ಚರ್ಚೆ ನಡೆಯಲಿದೆ.

ಬೆಂಗಳೂರು, ಸೆಪ್ಟೆಂಬರ್ 27: ಸಿಎಂ ಡಿಕೆ ಶಿವಕುಮಾರ್ ಸೋಮವಾರ ದೆಹಲಿಗೆ ತೆರಳಲಿದ್ದು, ಅದಕ್ಕೂ ಮುನ್ನ ಭಾನುವಾರ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮತದಾರರ ಚೀಟಿ ವಿಚಾರದಲ್ಲಿ ತುರ್ತು ಸಮಿತಿ ಸಭೆ ಕರೆದಿದ್ದು, ಈ ಸಂಬಂಧ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದು ತಿಳಿಸಿದರು. ಈ ವಿಷಯದಲ್ಲಿ ರಾಹುಲ್ ಗಾಂಧಿ ಮತ್ತು ಖರ್ಗೆ ಅವರು ಈ ಹಿಂದೆ ಹೇಳಿದ ಮಾತುಗಳು ಈಗ ಸತ್ಯವಾಗುತ್ತಿವೆ. ಚುನಾವಣೆಗಳು ಬಹಳ ಅಕ್ರಮವಾಗಿ ನಡೆದಿವೆ ಎಂಬುದಕ್ಕೆ ಸಾಕ್ಷಿ ದೊರೆಯುತ್ತಿದೆ. ಈ ಕುರಿತು ದೇಶದಾದ್ಯಂತ ಜನರಲ್ಲಿ ಜಾಗೃತಿ ಮೂಡಿದೆ. ಈ ವಿಚಾರದಲ್ಲಿ ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸಲು ಭೇಟಿ ನೀಡಲಾಗಿದೆ. ನಾಡಿದ್ದು (ಬುಧವಾರ) ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲಾಗುವುದು. ನಂತರ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳ ಸಭೆಯನ್ನು ಕರೆಯಲಾಗುವುದು ಎಂದು ಅವರು ಹೇಳಿದರು.

ನಿಗಮ ಮಂಡಳಿ ನೇಮಕಾತಿ ಕುರಿತು ಪ್ರಶ್ನಿಸಿದಾಗ, ಈ ಕುರಿತು ಈಗಾಗಲೇ ದೆಹಲಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪಕ್ಷದಲ್ಲಿರುವ ಹಿರಿಯ ಶಾಸಕರು ಮತ್ತು ಕಾರ್ಯಕರ್ತರಿಗೆ ಆದ್ಯತೆ ನೀಡುವ ಕುರಿತು ನಿರ್ಧಾರವಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಮಹಿಳಾ ಸ್ಥಾನಗಳು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಯಲಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುನಿಲ್​ ಎಮ್​ ಹೆಚ್​