ಖರ್ಗೆ, ಸಿದ್ದರಾಮಯ್ಯನವರನ್ನ ಭೇಟಿ ಮಾಡಿದ ಜಾರ್ಜ್ ನಿವಾಸಕ್ಕೆ ಡಿಕೆಶಿ ದಿಢೀರ್ ಭೇಟಿ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗದಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ ಸ್ವತಃ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನು ಸಚಿವ ಜಾರ್ಜ್, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಡಿಕೆಶಿ ಜಾರ್ಜ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು (ನ.23) ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗದಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ ಸ್ವತಃ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನು ಸಚಿವ ಜಾರ್ಜ್, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಡಿಕೆಶಿ ಜಾರ್ಜ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಎರ್ಮೂರು ದಿನಗಳಿಂದ ಶಾಸಕರು, ಸಚಿವರು ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡುತ್ತಿದ್ದಾರೆ. ಆದ್ರೆ, ಡಿಕೆಶಿ ಮಾತ್ರ ಇಂದು ಜಾರ್ಜ್ ಅವರನ್ನ ಭೇಟಿ ಮಾಡಿದ್ದು, ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ, ಜಾರ್ಜ್ ಪವರ್ ಸೆಂಟರ್ ಆದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
Published on: Nov 23, 2025 10:55 PM
