ನೀಡಿರುವ ಆಶ್ವಾಸನೆಗಳನ್ನು ಈಡೇರಿಸದಿದ್ದರೆ ಸಿದ್ದರಾಮಯ್ಯನವರಾಗಲೀ, ನಾನಾಗಲೀ ಮತ್ಯಾವತ್ತೂ ವೋಟು ಕೇಳಿಕೊಂಡು ಕೋಲಾರ ಬರಲ್ಲ: ಡಿಕೆ ಶಿವಕುಮಾರ

ಅರುಣ್​ ಕುಮಾರ್​ ಬೆಳ್ಳಿ

Updated on: Feb 04, 2023 | 6:24 PM

ಮುಂದುವರಿದು ಅವರು ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದಾರೆ, ನಾನು ದಕ್ಷಿಣ ಕರ್ನಾಟಕದಲ್ಲಿ ನಡೆಸುತ್ತಿದ್ದೇನೆ ಅಂತ ಹೇಳುತ್ತಾರೆ. ತಮ್ಮ ಮಾತಿನಲ್ಲಿ ಪದೇಪದೆ ಸಿದ್ದರಾಮಯ್ಯನವರ ಉಲ್ಲೇಖವನ್ನು ಶಿವಕುಮಾರ್ ಮಾಡುತ್ತಿದ್ದಾರೆ.

ಕೋಲಾರ: ಚುನಾವಣೆ ದಿನಗಳು ಹತ್ತಿರವಾಗುತ್ತಿರುವಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯ (Siddaramaiah) ನಡುವಿನ ಹೊಂದಾಣಿಕೆ, ಸಮನ್ವಯತೆ, ಬಾಂಧವ್ಯ ಬಲಗೊಳ್ಳುತ್ತಾ ಸಾಗಿದೆ. ಇದು ಕಾಂಗ್ರೆಸ್ ಎದುರಾಳಿ ಪಕ್ಷಗಳಿಗೆ ಅಪಾಯದ ಗಂಟೆ ಮತ್ತು ಜೀರ್ಣೀಸಿಕೊಳ್ಳಾಗದ ಸತ್ಯ. ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ (Prajadhvani Yatre) ನಡೆಸುತ್ತಿರುವ ಶಿವಕುಮಾರ್ ಮಾತು ಕೇಳಿಸಿಕೊಳ್ಳಿ. ಕಾಂಗ್ರೆಸ್ ಪಕ್ಷ ನೀಡಿರುವ ಆಶ್ವಾಸನೆಗಳನ್ನು ಈಡೇರಿಸದಿದ್ದರೆ; ನಾನಾಗಲೀ, ಸಿದ್ದರಾಮಯ್ಯನವರಾಗಲೀ ನಿಮ್ಮ ಮುಂದೆ ಮತ್ಯಾವತ್ತೂ ವೋಟು ಕೇಳಲು ಬರುವುದಿಲ್ಲ ಅನ್ನುತ್ತಾರೆ. ಮುಂದುವರಿದು ಅವರು ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದಾರೆ, ನಾನು ದಕ್ಷಿಣ ಕರ್ನಾಟಕದಲ್ಲಿ ನಡೆಸುತ್ತಿದ್ದೇನೆ ಅಂತ ಹೇಳುತ್ತಾರೆ. ತಮ್ಮ ಮಾತಿನಲ್ಲಿ ಪದೇಪದೆ ಸಿದ್ದರಾಮಯ್ಯನವರ ಉಲ್ಲೇಖವನ್ನು ಶಿವಕುಮಾರ್ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.