ಕಮಲ್ ಹೇಳಿಕೆ ವಿವಾದ, ಕನ್ನಡಪರ ಸಂಘಟನೆಗಳಿಗೆ ಡಿಕೆಶಿ ಕಿವಿಮಾತು
Kamal Haasan: ಕಮಲ್ ಹಾಸನ್ ಕನ್ನಡದ ಬಗ್ಗೆ ನೀಡಿರುವ ಹೇಳಿಕೆಯನ್ನು ಕನ್ನಡಪರ ಸಂಘಟನೆಗಳು ವಿರೋಧಿಸಿದ್ದು, ಅವರ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಕ್ಕೆ ಬೆಂಕಿ ಇಡುವುದಾಗಿ ಎಚ್ಚರಿಸಿವೆ. ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿ, ಕನ್ನಡಪರ ಸಂಘಟನೆಗಳಿಗೆ ಕಿವಿಮಾತು ಹೇಳಿದ್ದಾರೆ. ಡಿಕೆ ಶಿವಕುಮಾರ್ ಹೇಳಿರುವುದೇನು? ಇಲ್ಲಿದೆ ನೋಡಿ ವಿಡಿಯೋ....
ಕಮಲ್ ಹಾಸನ್ (Kamal Haasan) ಕನ್ನಡದ ಪರ ನೀಡಿರುವ ಹೇಳಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಕಮಲ್ರ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಇಡುವುದಾಗಿ ಎಚ್ಚರಿಕೆ ನೀಡಿವೆ. ಇದೀಗ ಕಮಲ್ ಹಾಸನ್ ತಮ್ಮ ಸಿನಿಮಾಗೆ ಭದ್ರತೆ ಒದಗಿಸುವಂತೆ ಹೈಕೋರ್ಟ್ ಮೆಟ್ಟಿಲು ಸಹ ಹತ್ತಿದ್ದಾರೆ. ಈ ವಿವಾದದ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ‘ಪ್ರಕರಣ ಈಗ ನ್ಯಾಯಾಲಯದಲ್ಲಿದೆ, ನ್ಯಾಯಾಲಯವೇ ಕ್ಷಮೆ ಕೇಳುವಂತೆ ಸೂಚಿಸಿದೆ, ಹಾಗಾಗಿ ಕನ್ನಡಪರ ಸಂಘಟನೆಗಳು ತಾಳ್ಮೆಯಿಂದ ಇರಬೇಕು’ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 03, 2025 03:44 PM
Latest Videos