ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ
ದೆಹಲಿಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ವಿಸ್ತರಣೆ ಕುರಿತು ಮಾತನಾಡಿದ್ದಾರೆ. ಸಾರ್ವಜನಿಕವಾಗಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರೊಂದಿಗೆ ಮಾತನಾಡಬೇಕೋ ಅವರೊಂದಿಗೆ ಮಾತನಾಡಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತನಾಗಿ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ
ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಜೂ.10) ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ. “ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ. ಕಾರ್ಯಕರ್ತನಾಗಿ ಕಾರ್ಯಕರ್ತರಿಗೆ ನ್ಯಾಯ ಕೊಡಿಸುವಂತಹ ಪ್ರಯತ್ನವನ್ನು ಮಾಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಥವಾ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ, ತಾವು ಮಾಡಬೇಕಾದ ಮಾತುಕತೆಗಳನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jun 10, 2026 10:15 PM
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
