AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಲ್​​​ಪಿ ಸಭೆಗೂ ಮುನ್ನವೇ ವಿಧಾನಸೌಧದಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಸಿಎಲ್​​​ಪಿ ಸಭೆಗೂ ಮುನ್ನವೇ ವಿಧಾನಸೌಧದಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ರಮೇಶ್ ಬಿ. ಜವಳಗೇರಾ
|

Updated on: May 30, 2026 | 6:42 PM

Share

ರಾಜಧಾನಿಯ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು (ಮೇ 30) ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆಗೂ ಮುನ್ನವೇಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಬೆಂಗಳೂರು, ಮೇ 30): ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು (ಮೇ 30) ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು… ರಾಜಕೀಯದ ಪ್ರಮುಖ ನಿರ್ಧಾರಗಳು ಹೊರಬೀಳುವ ಮುನ್ನ ಡಿ.ಕೆ. ಶಿವಕುಮಾರ್ ಅವರು ನೊಣವಿನಕೆರೆ ಅಜ್ಜಯ್ಯ ನೀಡಿದ ಸಲಹೆ ಸೂಚನೆಗಳನ್ನ ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಹೌದು… ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿದ್ದ ಆಪ್ತರು, ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಹೊರಗೆ ಕಳುಹಿಸಿ, ಸಂಪೂರ್ಣವಾಗಿ ಏಕಾಂಗಿಯಾಗಿ ಈ ಪೂಜೆಯನ್ನು ನೆರವೇರಿಸಿದರು. ಯಾವುದೇ ಗದ್ದಲವಿಲ್ಲದೆ, ಏಕಾಗ್ರತೆಯಿಂದ ದೇವತಾ ಆರಾಧನೆಯಲ್ಲಿ ತೊಡಗಿಸಿಕೊಳ್ಳಲು ಅವರು ಬಯಸಿದ್ದರಿಂದ ಕೊಠಡಿಯ ಬಾಗಿಲು ಮುಚ್ಚಿ ರಹಸ್ಯವಾಗಿ ಪ್ರಾರ್ಥನೆ ಸಲ್ಲಿಸಿದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More