AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆಗಿ ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

ಸಿಎಂ ಆಗಿ ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

ಪ್ರಸನ್ನ ಗಾಂವ್ಕರ್​
| Edited By: |

Updated on: May 31, 2026 | 9:21 PM

Share

ಜೂನ್ 3ರಂದು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಇದೇ ದಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಯೋಜನೆ ರೂಪಿಸಲಾಗಿದೆ. ಪ್ರಮಾಣ ವಚನ ಸಮಾರಂಭವನ್ನು ವೀಕ್ಷಿಸಲು ನಾಯಕರಿಗಾಗಿ ಕಾಂಗ್ರೆಸ್ ಭವನದಲ್ಲಿ ದೊಡ್ಡ ಪರದೆಗಳನ್ನು ಅಳವಡಿಸಲಾಗುತ್ತದೆ.

ಬೆಂಗಳೂರು, ಮೇ 31: ಜೂನ್​ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್​​ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ ನಾಯಕರಿಗೂ ಲೋಕಭವನದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪದಾಧಿಕಾರಿಗಳಿಗಾಗಿ ಕಾಂಗ್ರೆಸ್ ಭವನದ ಆವರಣದಲ್ಲಿ ವಿಶೇಷ ವೇದಿಕೆ ಮತ್ತು ದೊಡ್ಡ ಪರದೆಗಳನ್ನು ಅಳವಡಿಸಲಾಗುತ್ತಿದೆ. ಈ ಮೂಲಕ ಅವರು ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಅನುಮೋದನೆ ದೊರೆತರೆ, ಈ ಕಾರ್ಯಕ್ರಮಗಳು ಜೂನ್ 3ರಂದು ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More