ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ಹಾಲಿ ಕಾಂಗ್ರೆಸ್ ಅಧ್ಯಕ್ಷ ಪ್ರಾರ್ಥನೆ! ಏನಂದ್ರು ನೋಡಿ

Edited By:

Updated on: Apr 06, 2025 | 11:54 AM

ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಒಂದು ಗುಂಪು ಪಟ್ಟು ಹಿಡಿದಿದೆ. ಇದರ ಮಧ್ಯ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್​ ಅವರಿಗೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಕಾಸರಗೋಡಿನ ಮಧೂರು ದೇವಸ್ಥಾನದ ಧಾರ್ಮಿಕ ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಹಾರೈಸಿದರು.

ಮಂಗಳೂರು/ಕಾಸರಗೋಡು, (ಏಪ್ರಿಲ್ 06): ನಳಿನ್ ಕುಮಾರ್ ಕಟೀಲ್‌ಗೆ (Nalin Kumar Kateel) ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮಧೂರು ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಪ್ರಾರ್ಥಿಸಿದ್ದಾರೆ. ಕೇರಳ (Kerala) ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ (Madhur Temple) ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ವೇಳೆ ನಳಿನ್ ಕುಮಾರ್ ಪರ ಡಿಕೆಶಿ ಬ್ಯಾಟಿಂಗ್ ಮಾಡಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆಶಿ, ನನ್ನ ಮಿತ್ರ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More