ಕಾಂಗ್ರೆಸ್ ಅಭ್ಯರ್ಥಿ ಪರ ಜನಾರ್ಧನರೆಡ್ಡಿ ವೋಟು ಮಾಡಲಿದ್ದಾರಾ ಅಂತ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಉತ್ತರಿಸಲಿಲ್ಲ!

|

Updated on: Feb 27, 2024 | 12:44 PM

ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಗಳ ಅಭ್ಯರ್ಥಿಗಳಿಗೆ ಕ್ರಾಸ್ ವೋಟು ಮಾಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರು ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರಿಗೆ ತಂದೆಯಂತಿರುವ ಶಾಮನೂರು ಶಿವಶಂಕರಪ್ಪನವರಿಗೂ ಫೋನ್ ಮಾಡಿದ್ದಾರೆ ಎಂದು ಹೇಳಿದರು.

ಬೆಂಗಳೂರು: ರಾಜ್ಯಸಭಾ ಚುನಾವಣೆಗಾಗಿ ಮತದಾನದಲ್ಲಿ ಪಾಲ್ಗೊಳ್ಳುವ ಮೊದಲು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಪಕ್ಷದ ಶಾಸಕರಿಗೆ ಫೋನ್ ಮಾಡಿದ ಸಂಗತಿಯನ್ನು ಮತ್ತೊಮ್ಮೆ ಹೇಳಿದರು. ರಾಜ್ಯಸಭಾ ಚುನಾವಣೆಯಲ್ಲಿ (Rajya Sabha polls) ತಮ್ಮ ಪಕ್ಷಗಳ ಅಭ್ಯರ್ಥಿಗಳಿಗೆ ಕ್ರಾಸ್ ವೋಟು ಮಾಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರು ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರಿಗೆ ತಂದೆಯಂತಿರುವ ಶಾಮನೂರು ಶಿವಶಂಕರಪ್ಪನವರಿಗೂ ಫೋನ್ ಮಾಡಿದ್ದಾರೆ ಎಂದು ಹೇಳಿದರು. ಅವರು ಮಾತ್ರವಲ್ಲ, ಕಾಂಗ್ರೆಸ್ ಪಕ್ಷದ ಸುಮಾರು 40 ಶಾಸಕರಿಗೆ ಪೋನ್ ಮಾಡಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಮುಂದುವರಿದು ಮಾತಾಡಿದ ಅವರು ಚುನಾವಣೆ ಮುಗಿದ ಬಳಿಕ ಎಲ್ಲವನ್ನೂ ವಿಶದವಾಗಿ ಮಾತಾಡುವುದಾಗಿ ಹೇಳಿದರು. ಮಾಧ್ಯಮದವರು ಜನಾರ್ಧನ ರೆಡ್ಡಿಯವರ ಬಗ್ಗೆ ಹೇಳಿ, ಅವರು ಕಾಂಗ್ರೆಸ್ ಅಭ್ಯರ್ಥಿ ಪರ ವೋಟು ಮಾಡುತ್ತಾರಾ ಅಂತ ಕೇಳಿದ್ದಕ್ಕೆ ಶಿವಕುಮಾರ್ ಉತ್ತರಿಸದೆ ಕಾರು ಹತ್ತಿ ಅಲ್ಲಿಂದ ಹೊರಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: 4 ಸ್ಥಾನಗಳಿಗೆ 223 ಶಾಸಕರಿಂದ ಮತದಾನ, ಇಲ್ಲಿದೆ ಫೋಟೋಸ್​​