ಮಂಗಳೂರುನಲ್ಲಿಂದು ರಾಜ್ಯ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ, ಸಿದ್ಧತೆ ವೀಕ್ಷಿಸಿದ ಡಿಕೆ ಶಿವಕುಮಾರ್

| Updated By: Digi Tech Desk

Updated on: Feb 19, 2024 | 3:56 PM

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಎಐಸಿಸಿ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವಕುಮಾರ್ ಅಲ್ಲದೆ ಇತರ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮೇಲೆ ಖರ್ಗೆ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿರುವುದರಿಂದ ಅವರನ್ನು ಸತ್ಕರಿಸಲು ಏರ್ಪಾಟು ಮಾಡಲಾಗಿದೆ.

ಮಂಗಳೂರು: ರಾಜ್ಯ ಕಾಂಗ್ರೆಸ್ ಮುಂಬರುವ ಲೋಕ ಸಭಾ ಚುನಾವಣೆಗೆ (Lok Sabha polls) ಸಿದ್ಧತೆಗಳನ್ನು ಶುರುಮಾಡಿಕೊಂಡಿದೆ. ಇದರ ಅಂಗವಾಗೇ ನಗರದಲ್ಲಿಂದು ರಾಜ್ಯಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು ಸಿದ್ಧತೆಗಳನ್ನು ವೀಕ್ಷಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಆಗಮಿಸಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕಾರ್ಯಕ್ರಮ ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ (Sahyadri College Grounds) ನಡೆಯಲಿದ್ದು ದೊಡ್ಡ ವೇದಿಕೆ ಮತ್ತು ಸಾಕಷ್ಟು ಸಂಖ್ಯೆಯಲ್ಲಿ ಕುರ್ಚಿಗಳನ್ನು ಓರಣವಾಗಿ ವ್ಯವಸ್ಥೆ ಮಾಡಿದ್ದು ಕಾಣಿಸುತ್ತದೆ. ಸ್ಥಳದಲ್ಲಿ ಕಾರ್ಯಕರ್ತರಲ್ಲದೆ ಭದ್ರತೆಗಾಗಿ ಪೊಲೀಸರು ನಿಯೋಜನೆಗೊಂಡಿರುವದನ್ನು ವಿಡಿಯೋದಲ್ಲಿ ನೋಡಬಹುದು. ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಎಐಸಿಸಿ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವಕುಮಾರ್ ಅಲ್ಲದೆ ಇತರ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮೇಲೆ ಖರ್ಗೆ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿರುವುದರಿಂದ ಅವರನ್ನು ಸತ್ಕರಿಸಲು ಏರ್ಪಾಟು ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 17, 2024 12:09 PM