ನಟಿ ರಮ್ಯಾಗೆ ಅಶ್ಲೀಲ ಕಮೆಂಟ್: ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು?
ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ ಅವರಿಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದು ವಿವಾದಕ್ಕೆ ಕಾರಣ ಆಗಿದೆ. ರಮ್ಯಾ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಕಿಡಿಗೇಡಿಗಳಿಗೆ ಪಾಠ ಕಲಿಸಲು ಮುಂದಾಗಿದ್ದಾರೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಖ್ಯಾತ ನಟಿ ರಮ್ಯಾ ಅವರಿಗೆ ದರ್ಶನ್ ಅಭಿಮಾನಿಗಳು (Darshan Fans) ಅಶ್ಲೀಲ ಸಂದೇಶ ಕಳಿಸಿದ್ದು ವಿವಾದಕ್ಕೆ ಕಾರಣ ಆಗಿದೆ. ರಮ್ಯಾ (Ramya) ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಕಿಡಿಗೇಡಿಗಳಿಗೆ ಪಾಠ ಕಲಿಸಲು ಮುಂದಾಗಿದ್ದಾರೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನಮ್ಮ ಪಾರ್ಟಿಯವರಿಗೆ ಯಾರೆಲ್ಲ ಬೆಂಬಲ ಕೊಡುತ್ತಾರೋ ನಾವು ಅವರಿಗೆಲ್ಲ ಬೆಂಬಲ ಕೊಡುತ್ತಿರುತ್ತೇವೆ. ನಮ್ಮ ಗೃಹ ಸಚಿವರನ್ನು ಕೇಳಿ. ಅವರು ನಿಮಗೆ ಅದರ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತಾರೆ’ ಎಂದು ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
