ಕಮಲ್ ಹಾಸನ್ ವಿಚಾರದಲ್ಲಿ ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ

Updated on: Jun 03, 2025 | 8:14 PM

ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ಕನ್ನಡಿಗರು ಗರಂ ಆಗಿದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. ಈ ವಿಷಯದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳು ನಟ ಕಮಲ್ ಹಾಸನ್ (Kamal Haasan) ಅವರು ಕನ್ನಡ ಭಾಷೆಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ಕನ್ನಡಿಗರು ಗರಂ ಆಗಿದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳಬೇಕು ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. ಈ ವಿಷಯದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಪ್ರತಿಕ್ರಿಯೆ ನೀಡಿದ್ದಾರೆ. ‘ಈಗ ಕೋರ್ಟ್ ಹೇಳಿದೆ. ಕಮಲ್ ಹಾಸನ್ ಅವರು ನ್ಯಾಯಾಲಯಕ್ಕೆ ಗೌರವ ಕೊಡುತ್ತಾರೆ. ನಮ್ಮವರು ಯಾರೂ ಕೂಡ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪ್ರತಿಭಟನೆ ಮಾಡಲಿ, ತಪ್ಪಿಲ್ಲ. ಆದರೆ ಯಾರೂ ಕೂಡ ಚಿತ್ರಮಂದಿರಗಳ ಬಳಿ ಹೋಗಿ ಗಲಾಟೆ ಮಾಡಬಾರದು. ಜಾತಿ ಕಲಹ ಉಂಟುಮಾಡುವ ಕೆಲಸ ದಯವಿಟ್ಟು ಮಾಡಬಾರದು’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.