ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರಲಿಲ್ಲ ಅಲ್ವಾ? ಹೆಬ್ಬಾರ್, ಸೋಮಶೇಖರ್ ಉಚ್ಚಾಟನೆಗೆ ಹೀಗ್ಯಾಕಂದ್ರು ಡಿಕೆಶಿ…
ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಉಚ್ಚಾಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ಹಾಗೂ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಕಾರಣ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು, ಮೇ 27: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಚಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರಲಿಲ್ಲ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಅವರೇನು (ಹೆಬ್ಬಾರ್ ಹಾಗೂ ಸೋಮಶೇಖರ್) ಯಾರಿಗೂ ಹೆಚ್ಐವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಲಿ ಎಂದು ಪರೋಕ್ಷವಾಗಿ ಮುನಿರತ್ನ ಏಕೆ ಉಚ್ಚಾಟನೆ ಆಗಿಲ್ಲ ಎಂದು ಪ್ರಶ್ನಿಸಿದ್ದಾರೆ.
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

