ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರಲಿಲ್ಲ ಅಲ್ವಾ? ಹೆಬ್ಬಾರ್, ಸೋಮಶೇಖರ್ ಉಚ್ಚಾಟನೆಗೆ ಹೀಗ್ಯಾಕಂದ್ರು ಡಿಕೆಶಿ…

Edited By:

Updated on: May 27, 2025 | 2:14 PM

ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್​​ಟಿ ಸೋಮಶೇಖರ್ ಉಚ್ಚಾಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ಹಾಗೂ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಕಾರಣ ಶಿವರಾಮ್ ಹೆಬ್ಬಾರ್ ಹಾಗೂ ಎಸ್​​ಟಿ ಸೋಮಶೇಖರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, ಮೇ 27: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್​​ಟಿ ಸೋಮಶೇಖರ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಚಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರಲಿಲ್ಲ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಅವರೇನು (ಹೆಬ್ಬಾರ್ ಹಾಗೂ ಸೋಮಶೇಖರ್) ಯಾರಿಗೂ ಹೆಚ್​​ಐವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಲಿ ಎಂದು ಪರೋಕ್ಷವಾಗಿ ಮುನಿರತ್ನ ಏಕೆ ಉಚ್ಚಾಟನೆ ಆಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More