ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ, ಆದರೆ ಅದು… ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ?

Edited By:

Updated on: Feb 07, 2026 | 11:34 AM

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಗಳು ಮುಂದುವರಿದಿವೆ. ಯತೀಂದ್ರ ಸಿದ್ದರಾಮಯ್ಯ ಅವರ ‘ಐದು ವರ್ಷ ಸಿದ್ದರಾಮಯ್ಯ ಸಿಎಂ’ ಹೇಳಿಕೆಗೆ ಡಿಕೆ ಶಿವಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ಇದೀಗ ಇಬ್ಬರೂ ನಾಯಕರು, ಸಿಎಂ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದರೂ, ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್‌ನದ್ದೇ ಆಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳೂರು, ಫೆಬ್ರವರಿ 7: ಸಿಎದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಮಂಗಳೂರಿನಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಸಿಎಂ ಆಗಬೇಕು ಎಂಬ ಶಾಸಕರಿಗೆ, ಜನರಿಗೆ ಹಾಗೂ ನಿಮಗೆ ಎಲ್ಲರಿಗೂ ಇದೆ. ಆದರೆ ಅಂತಿಮವಾಗಿ ಪಕ್ಷ ಏನು ಹೇಳುತ್ತದೋ ಅದೇ ಆಗುತ್ತದೆ ಎಂದು ಹೇಳಿದ್ದಾರೆ. ಬಜೆಟ್ ಬಳಿಕ ಸಿಎಂ ಬದಲಾವಣೆ ಬಗ್ಗೆ ಕೇಳಿದಾಗ, ಕಾಲವೇ ಉತ್ತರಿಸಲಿದೆ ಎಂದು ಪ್ರತಿಕ್ರಿಯಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More