ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಯತೀಂದ್ರ ಹೇಳಿಕೆಗೆ ಡಿಕೆಶಿ ಕೌಂಟರ್ ಹೀಗಿತ್ತು ನೋಡಿ
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ವಿಪಕ್ಷಗಳು ಕೂಡ ಈ ಹೇಳಿಕೆಗೆ ಧ್ವನಿಗೂಡಿಸಿವೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದಿದ್ದಾರೆ.
ಬೆಂಗಳೂರು, ಡಿಸೆಂಬರ್ 9: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೋಮವಾರ ಬೆಳಗಾವಿಯಲ್ಲಿ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಯತೀಂದ್ರ ಹೇಳಿಕೆಯ ಬೆನ್ನಲ್ಲೇ ವಿರೋಧ ಪಕ್ಷಗಳು ಕೂಡ ಈ ವಿಷಯಕ್ಕೆ ಧ್ವನಿಗೂಡಿಸಿ, ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿವೆ. ಈ ಹೇಳಿಕೆಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.
Latest Videos
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ

