ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ ಡಿಕೆ ಶಿವಕುಮಾರ್
ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಪ್ರಧಾನಿ ಮೋದಿಯವರ ಎಚ್ಚರಿಕೆ ಕುರಿತು ಪ್ರಸ್ತಾಪಿಸಿದರು. ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಮತ್ತು ಹೂಳು ಸಮಸ್ಯೆ ಪರಿಹರಿಸಲು ಆಂಧ್ರ, ತೆಲಂಗಾಣ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ, ಜುಲೈ 09: ಮಳೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ. ಕಿತ್ತೂರು ಕರ್ನಾಟಕದ ಕೆಲವು ಕಡೆ ಸ್ವಲ್ಪ ಮಳೆ ಬರುತ್ತಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ತು, ಇಪ್ಪತ್ತು, ಮೂವತ್ತು ಪರ್ಸೆಂಟ್ ಮಳೆ ಬಂದಿದೆ. ತುಂಗಭದ್ರಾದಲ್ಲಿ ಭೀಕರವಾದ ಸಮಸ್ಯೆ ನೋಡುತ್ತಿದ್ದೇವೆ. ರಾಜ್ಯದಾದ್ಯಂತ 50 ವರ್ಷಗಳಿಗಿಂತ ಹಳೆಯದಾದ ಎಲ್ಲಾ ಡ್ಯಾಂ ಗೇಟ್‌ಗಳ ಸ್ಥಿತಿಗತಿಯನ್ನು ಅಧ್ಯಯನ ಮಾಡಿ ಬದಲಾಯಿಸಲು ನಿರ್ಧರಿಸಲಾಗಿದೆ. 33 ಗೇಟ್‌ಗಳ ಬದಲಾವಣೆ ಸರ್ಕಾರದ ಪ್ರಥಮ ಕರ್ತವ್ಯವಾಗಿದೆ ಎಂದರು. ಇನ್ನು ತುಂಗಭದ್ರಾ ಡ್ಯಾಂನಲ್ಲಿ ಹೂಳು ತೆಗೆಸಲಾಗುತ್ತದೆ. 3 ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಿಗೆ ಸಭೆ ನಡೆಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಆಂಧ್ರ ಮುಖ್ಯಮಂತ್ರಿ ನಾವು ಒಪ್ಪಂದಕ್ಕೆ ಬಂದಿದ್ದೇವೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 09, 2026 07:01 PM
Follow Us
