AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಶೂಟೌಟ್ ಪ್ರಕರಣ: ತಮಿಳುನಾಡು ಸಿಎಂ ವಿಜಯ್‌ ಹೇಳಿಕೆಗೆ ಡಿಕೆಶಿ ತಿರುಗೇಟು

ಚಾಮರಾಜನಗರ ಶೂಟೌಟ್ ಪ್ರಕರಣ: ತಮಿಳುನಾಡು ಸಿಎಂ ವಿಜಯ್‌ ಹೇಳಿಕೆಗೆ ಡಿಕೆಶಿ ತಿರುಗೇಟು

Anil Kalkere
| Edited By: |

Updated on:Aug 18, 2026 | 1:21 PM

Share

ಚಾಮರಾಜನಗರ ಶೂಟೌಟ್ ಪ್ರಕರಣದ ಬಗ್ಗೆ ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ರಾಜ್ಯಗಳ ಕಾನೂನು ಸುವ್ಯವಸ್ಥೆ ಮತ್ತು ಆಡಳಿತದಲ್ಲಿ ಪರಸ್ಪರ ಮಧ್ಯಪ್ರವೇಶಿಸಬಾರದು, ಇದು ಸಂಯುಕ್ತ ರಚನೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ರಾಜ್ಯದ ರಕ್ಷಣೆ ನಮಗೆ ಗೊತ್ತಿದೆ, ಅವರ ಕೆಲಸ ಅವರು ನೋಡಿಕೊಳ್ಳಲಿ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು, ಆಗಸ್ಟ್​​ 18: ಚಾಮರಾಜನಗರದ ಹನೂರು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ ಹೇಳಿಕೆಗೆ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ರಾಜ್ಯಗಳ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ವಿಚಾರಗಳಲ್ಲಿ ಇತರೆ ರಾಜ್ಯಗಳು ಮಧ್ಯಪ್ರವೇಶ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಇದು ಸಂಯುಕ್ತ ರಚನೆ. ಯಾವುದೇ ರಾಜ್ಯ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ನಾನು ತಮಿಳುನಾಡು ವಿಚಾರದಲ್ಲಿ ತಲೆ ಹಾಕಿಲ್ಲ. ನಮ್ಮ ರಾಜ್ಯದ ರಕ್ಷಣೆ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ. ಸಿಎಂ ವಿಜಯ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ತಮಿಳುನಾಡು ನಾಯಕರು ಅವರ ಕೆಲಸ ಅವರು ಮಾಡಲಿ, ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 18, 2026 01:21 PM

Follow Us