5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದ ಯತೀಂದ್ರ: ಮಾರ್ಮಿಕವಾಗಿ ಉತ್ತರ ಕೊಟ್ಟ ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯನವರೇ 5 ವರ್ಷಗಳ ಕಾಲ ಸಿಎಂ ಎಂಬ ಎಂಎಲ್ಸಿ ಯತೀಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ನೀಡ್ತಾರೆ ಎಂದು ಡಿಕೆಶಿ ಹೇಳಿದ್ದಾರೆ. ಇತ್ತೀಚೆಗೆ ನಡೆಯುತ್ತಿರುವ ಪಕ್ಷದಲ್ಲಿನ ಡಿನ್ನರ್ ಮೀಟಿಂಗ್ಗಳ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳು ಅವರನ್ನು ಈ ವೇಳೆ ಪ್ರಶ್ನಿಸಿದ್ದಾರೆ.
ಬೆಳಗಾವಿ, ಡಿಸೆಂಬರ್ 11: ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ವಿಧಾನ ಪರಿಷತ್ ಸದಸ್ಯ ಯತೀಂದ್ರ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ನೀಡೋದಾಗಿ ಡಿಕೆಶಿ ಹೇಳಿದ್ದಾರೆ. ಇತ್ತೀಚೆಗೆ ನಡೆಯುತ್ತಿರುವ ಪಕ್ಷದಲ್ಲಿನ ಡಿನ್ನರ್ ಮೀಟಿಂಗ್ಗಳ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳು ಉಪ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದು, ಡಿಸಿಎಂ ಅವರ ಮೌನವೇ ಇದಕ್ಕೆ ಉತ್ತರವಾಗಿರೋದು ಕಂಡುಬಂತು. ಚುನಾವಣಾ ಅಕ್ರಮ ವಿಚಾರವಾಗಿಯೂ ಡಿ.ಕೆ. ಶಿವಕುಮಾರ್ ಅವರು ಈ ವೇಳೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 11, 2025 01:00 PM
Latest Videos
