ಪ್ರಜ್ವಲ್ ರೇವಣ್ಣ ಪ್ರಕರಣ; ನೂರಾರು ಮಹಿಳೆಯರ ಗೌರವಕ್ಕೆ ಚ್ಯುತಿ ತಂದಿರುವ ಶಿವಕುಮಾರ್ ರಾಜೀನಾಮೆ ನೀಡಬೇಕು: ಯೋಗೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: May 08, 2024 | 5:46 PM

ಶಿವಕುಮಾರ್ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದರೂ, ಮಾದರಿಯೆನಿಸುವ ಆಡಳಿತ ನಡೆಸದೆ ಅಡ್ಡದಾರಿ ಹಿಡಿದಿದ್ದಾರೆ. ಹಿಂದೆ ಅವರು ನಡೆಸಿದ ಅಡ್ಡ ಕಸುಬುಗಳು ಸಾಬೀತಾಗಿವೆ. ಈಗ ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಅವರು ಹುದ್ದೆಯ ಘನತೆಗೆ ತಕ್ಕಂತೆ ವರ್ತಿಸದೆ, ಹೆಚ್ ಡಿ ದೇವೇಗೌಡರ ಕುಟುಂಬವನ್ನು ತೇಜೋವಧೆ ಮಾಡುವ ಮತ್ತು ಅವರ ಪಕ್ಷವನ್ನು ಮಟ್ಟಹಾಕುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಯೋಗೇಶ್ವರ್ ಹೇಳಿದರು,

ರಾಮನಗರ: ಅಶ್ಲೀಲ ವಿಡಿಯೋಗಳನ್ನು ಬಹಿರಂಗ ಮಾಡುವಲ್ಲಿ ನೇರವಾಗಿ ಭಾಗಿಯಾಗಿರುವ ಡಿಕೆ ಶಿವಕುಮಾರ್ (DK Shivakumar) ತಾವು ನಿರ್ವಹಿಸುತ್ತಿರುವ ಹುದ್ದೆಗೆ ಕಳಂಕ ತಂದಿದ್ದಾರೆ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪಕ್ಷದ ಜಿಲ್ಲಾ ಮುಖಂಡರು ಇವತ್ತು ಪ್ರತಿಭಟನೆ ನಡೆಸಿದ್ದಾಗಿ ಹಿರಿಯ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ (CP Yogeshwar) ಹೇಳಿದರು. ಪ್ರತಿಭಟನೆ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತನಿಖೆ ನಡೀತಾ ಇದೆ, ಅಶ್ಲೀಲ ವಿಡಿಯೋಗಳು (Sleaze videos) ಪ್ರಜ್ವಲ್ ರೇವಣ್ಣನ ಖಾಸಗಿ ವಿಚಾರ ಅದರ ಬಗ್ಗೆ ಕಾಮೆಂಟ್ ಮಾಡಲ್ಲ, ಅದರೆ ವಿಡಿಯೋಗಳಿಂದಾಗಿ ನೂರಾರು ಮಹಿಳೆಯ ಗೌರವ ಮಣ್ಣುಪಾಲಾಯಿತಲ್ಲ? ಶಿವಕುಮಾರ್ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದರೂ, ಮಾದರಿಯೆನಿಸುವ ಆಡಳಿತ ನಡೆಸದೆ ಅಡ್ಡದಾರಿ ಹಿಡಿದಿದ್ದಾರೆ. ಹಿಂದೆ ಅವರು ನಡೆಸಿದ ಅಡ್ಡ ಕಸುಬುಗಳು ಸಾಬೀತಾಗಿವೆ. ಈಗ ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಅವರು ಹುದ್ದೆಯ ಘನತೆಗೆ ತಕ್ಕಂತೆ ವರ್ತಿಸದೆ, ಹೆಚ್ ಡಿ ದೇವೇಗೌಡರ ಕುಟುಂಬವನ್ನು ತೇಜೋವಧೆ ಮಾಡುವ ಮತ್ತು ಅವರ ಪಕ್ಷವನ್ನು ಮಟ್ಟಹಾಕುವ ಕೆಲಸದಲ್ಲಿ ತೊಡಗಿದ್ದಾರೆ, ಅವರು ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಯೋಗೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನನ್ನ ಮತ್ತು ಕುಮಾರಸ್ವಾಮಿ ನಡುವೆ ರಾಜಕೀಯ ವೈಷಮ್ಯವಿರಲಿಲ್ಲ; ಬೇರೆ ಬೇರೆ ಪಕ್ಷಗಳಲ್ಲಿದ್ದೆವು, ಅಷ್ಟೇ: ಸಿಪಿ ಯೋಗೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.