ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದ ಡಿಕೆ ಶಿವಕುಮಾರ್: ರೈತರ ಮನವೊಲಿಸಲು ಸಭೆ
ಮಂಡ್ಯ ಜಿಲ್ಲೆಯ ರೈತರಿಂದ ಸಾಕಷ್ಟು ವಿರೋಧಕ್ಕೆ ಗುರಿಯಾಗಿರುವ ‘ಕಾವೇರಿ ಆರತಿ’ ಯೋಜನೆ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಮಹತ್ವದ ಸಭೆ ನಡೆಸಿದರು. ರೈತರ ಮನವೊಲಿಸುವುದಕ್ಕೆ ಸಂಬಂಧಿಸಿ ನಡೆದ ಈ ಸಭೆಯಲ್ಲಿ ಯೋಜನೆ ಬಗ್ಗೆ ವಿಸ್ತೃತ ಚರ್ಚೆಯೂ ನಡೆಯಿತು. ಸಭೆಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಜೂನ್ 25: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ‘ಕಾವೇರಿ ಆರತಿ’ಗೆ ರೈತರಿಂದ ವಿರೋಧ ವ್ಯಕ್ತವಾಗಿರುವ ಕಾರಣ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ವಿಧಾನಸೌಧದಲ್ಲಿ ರೈತ ಮುಖಂಡರ ಜತೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಂಎಲ್ಸಿ ದಿನೇಶ್‌ಗೂಳಿಗೌಡ ಭಾಗಿಯಾದರು. ಡಿಕೆ ಶಿವಕುಮಾರ್, ರೈತ ಮುಖಂಡರ ಮನವೊಲಿಸುವ ಪ್ರಯತ್ನ ಮಾಡಿದರು. ಇದೇ ವೇಳೆ, ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದರು. ವಿಡಿಯೋ ಇಲ್ಲಿದೆ.
Published on: Jun 25, 2025 02:09 PM