ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದ ಡಿಕೆ ಶಿವಕುಮಾರ್: ರೈತರ ಮನವೊಲಿಸಲು ಸಭೆ

Edited By:

Updated on: Jun 25, 2025 | 2:11 PM

ಮಂಡ್ಯ ಜಿಲ್ಲೆಯ ರೈತರಿಂದ ಸಾಕಷ್ಟು ವಿರೋಧಕ್ಕೆ ಗುರಿಯಾಗಿರುವ ‘ಕಾವೇರಿ ಆರತಿ’ ಯೋಜನೆ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಮಹತ್ವದ ಸಭೆ ನಡೆಸಿದರು. ರೈತರ ಮನವೊಲಿಸುವುದಕ್ಕೆ ಸಂಬಂಧಿಸಿ ನಡೆದ ಈ ಸಭೆಯಲ್ಲಿ ಯೋಜನೆ ಬಗ್ಗೆ ವಿಸ್ತೃತ ಚರ್ಚೆಯೂ ನಡೆಯಿತು. ಸಭೆಯ ವಿಡಿಯೋ ಇಲ್ಲಿದೆ.

ಬೆಂಗಳೂರು, ಜೂನ್ 25: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​​ಎಸ್ ಡ್ಯಾಂನಲ್ಲಿ ‘ಕಾವೇರಿ ಆರತಿ’ಗೆ ರೈತರಿಂದ ವಿರೋಧ ವ್ಯಕ್ತವಾಗಿರುವ ಕಾರಣ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ವಿಧಾನಸೌಧದಲ್ಲಿ ರೈತ ಮುಖಂಡರ ಜತೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಂಎಲ್​​ಸಿ ದಿನೇಶ್‌ಗೂಳಿಗೌಡ ಭಾಗಿಯಾದರು. ಡಿಕೆ ಶಿವಕುಮಾರ್, ರೈತ ಮುಖಂಡರ ಮನವೊಲಿಸುವ ಪ್ರಯತ್ನ ಮಾಡಿದರು. ಇದೇ ವೇಳೆ, ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದರು. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 25, 2025 02:09 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More