ಹೆಬ್ಬಾಳ ಹೊಸ ಫ್ಲೈಓವರ್ ಮೇಲೆ ಡಿಕೆ ಶಿವಕುಮಾರ್ ಬೈಕ್ ರೈಡಿಂಗ್
K.R.ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ ಹೆಬ್ಬಾಳ ನೂತನ ಮೇಲ್ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಅದಕ್ಕೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಯೆಜ್ಡಿ ಬೈಕ್‌ನಲ್ಲಿ ಸವಾರಿ ಮಾಡಿದ್ದಾರೆ. ಟ್ರಾಫಿಕ್ ಕಡಿಮೆ ಮಾಡಬೇಕು ಅಂತ ಇದನ್ನು ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು, ಆಗಸ್ಟ್ 18: ಸೋಮವಾರದಂದು ಹೆಬ್ಬಾಳ ನೂತನ ಮೇಲ್ಸೇತುವೆ (hebbal flyover) ಉದ್ಘಾಟನೆಗೊಂಡಿದೆ. ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಬೈಕ್ ಸವಾರಿ ಮಾಡಿದರು. ತಮ್ಮ ನೆಚ್ಚಿನ ಯೆಜ್ಡಿ ಬೈಕ್ ಹತ್ತಿ ಹೆಬ್ಬಾಳ ನೂತನ ಮೇಲ್ಸೇತುವೆ ಮೇಲೆ ಸವಾರಿ ಮಾಡಿದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 18, 2025 12:44 PM