ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ ಕೆಲಸ ಅಪೂರ್ಣ, ಪ್ರತ್ಯೇಕ ಮೀಟಿಂಗ್ ಬೇಕೆಂದ ತಮಿಳುನಾಡು

ಅರುಣ್​ ಕುಮಾರ್​ ಬೆಳ್ಳಿ

Updated on: Mar 18, 2025 | 6:45 PM

ದಕ್ಷಿಣ ರಾಜ್ಯಗಳ ಪ್ರತಿನಿಧಿಗಳೊಂದಿಗೆ ಇವತ್ತು ನಡೆಯಬೇಕಿದ್ದ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸಂಪುಟ ಸಭೆಯಲ್ಲಿ ಚರ್ಚಿಸಿದ್ದಾರಂತೆ. ಅದರೆ ನೀರಾವರಿ ಯೋಜನೆಗಳ ವಿಷಯ ಪ್ರಸ್ತಾಪವಾದಾಗೆಲ್ಲ ತಮಿಳುನಾಡು ಸರ್ಕಾರದಿಂದ ಕರ್ನಾಟಕಕ್ಕೆ ಹಿನ್ನಡೆಯಾಗುತ್ತಿದೆ. ಅಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ರಾಜ್ಯದ ಹಿತಾಸಕ್ತಿಯನ್ನು ಯಾವತ್ತೂ ಬಿಟ್ಟುಕೊಡಲ್ಲ, ಅದರಲ್ಲೂ ವಿಶೇಷವಾಗಿ ನೀರಾವರಿ ಸಮಸ್ಯೆಗಳ ವಿಚಾರದಲ್ಲಿ.

ದೆಹಲಿ, ಮಾರ್ಚ್ 18: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ (Delhi visit) ನೀಡಿದ ಉದ್ದೇಶ ಪೂರ್ತಿಗೊಂಡಿಲ್ಲ. ರಾಜ್ಯದ ನೀರಾವರಿ ಯೋಜನೆಗಳು ಮತ್ತು ತಮಿಳುನಾಡು ಸೇರಿದಂತೆ ಪಕ್ಕದೆ ರಾಜ್ಯಗಳ ಜೊತೆಯಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸುಪ್ರೀಮ್ ಕೊರ್ಟ್​ನಲ್ಲಿ ಇಂದು ಒಂದು ನೆಗೋಶಿಯೇಷನ್ ಮೀಟಿಂಗ್ ಏರ್ಪಡಿಸಲಾಗಿತ್ತು. ಕಳೆದ ಸಲ ದೆಹಲಿ ಭೇಟಿಯ ಸಂದರ್ಭದಲ್ಲ್ಲಿ ಶಿವಕುಮಾರ್ ಕೇಂದ್ರದ ಕೆಲ ಮಂತ್ರಿಗಳೊಂದಿಗೆ ಚರ್ಚಿಸಿದ್ದರಂತೆ. ಆದರೆ ತಮಿಳುನಾಡುನವರು ತಡರಾತ್ರಿ ಫೋನ್ ಮಾಡಿ ನಮಗೆ ಮೀಟಿಂಗ್​ನಲ್ಲಿ ಭಾಗವಹಿಸಲಾಗಲ್ಲ, ನಮಗೋಸ್ಕರ ಒಂದು ಪ್ರತ್ಯೇಕ ಮೀಟಿಂಗ್ ಏರ್ಪಡಿಸಿ ಅಂತ ಹೇಳಿದ್ದರಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ಶಿವಕುಮಾರ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪಕ್ಷದ ಸಂಘಟನೆ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.