ಕಾಂಗ್ರೆಸ್ ಶಾಸಕಾಂಗ ಸಭೆ ಅಂತ್ಯ; ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು(ಜೂ.02) ಕಾಂಗ್ರೆಸ್ ಶಾಸಕಾಂಗ ಸಭೆ (Congress legislative meeting) ಹಮ್ಮಿಕೊಳ್ಳಲಾಗಿತ್ತು. ಮೀಟಿಂಗ್ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕಾಂಗ ಸಭೆಯಲ್ಲಿ ಎಂಎಲ್ಸಿ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಬೆಂಗಳೂರು, ಜೂ.02: ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು(ಜೂ.02) ಕಾಂಗ್ರೆಸ್ ಶಾಸಕಾಂಗ ಸಭೆ (Congress legislative meeting) ಹಮ್ಮಿಕೊಳ್ಳಲಾಗಿತ್ತು. ಮೀಟಿಂಗ್ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕಾಂಗ ಸಭೆಯಲ್ಲಿ ಎಂಎಲ್ಸಿ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ. ನಾಳೆ(ಜೂ.03) ನಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಭೆಯಲ್ಲಿ ಎಂಎಲ್ಸಿ ಚುನಾವಣೆ ಬಿಟ್ಟು ಬೇರೆ ವಿಚಾರ ಚರ್ಚಿಸಿಲ್ಲ ಎಂದರು.
ಇದೇ ವೇಲೆ ‘ಬೆಂಗಳೂರಿನಲ್ಲಿ ಒಳ್ಳೆಯ ಮಳೆ ಆಗುತ್ತಿದ್ದು, ಧಾರಾಕಾರ ಮಳೆಯಿಂದ ಹಲವೆಡೆ ಅವಾಂತರವಾಗಿದೆ. ಜೊತೆಗೆ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದಾರೆ. ಈಗಾಗಲೇ ಮಳೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದೇನೆ. ಮಳೆಹಾನಿ ತಡೆಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಮಳೆ ಹಾನಿ ಬಗ್ಗೆ ಕಂಟ್ರೋಲ್ ರೂಂನಲ್ಲಿ ಮಾಹಿತಿ ಪಡೆಯಲಾಗುತ್ತಿದೆ.
ಮಳೆ ಬಗ್ಗೆ ರಾತ್ರಿಯಿಡೀ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ