ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಡಿಕೆ ಶಿವಕುಮಾರ್ : ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು, ನೀರು

Updated on: Jun 20, 2026 | 3:58 PM

ರಾಜ್ಯದ ಜನರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ (Electricity Connection) ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್‌ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹಳೆಯ ಕಟ್ಟಡಗಳು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ ಕಟ್ಟಡಗಳಿಗೆ ಆದೇಶ ಪ್ರಕಟವಾದ ದಿನದಿಂದ 15 ದಿನಗಳ ಒಳಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಇನ್ನು ಖಾಲಿ ಇರುವ ನಿವೇಶನಕ್ಕೆ ಒಸಿ, ಸಿಸಿ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ಬೆಂಗಳೂರು, (ಜೂನ್ 20): ರಾಜ್ಯದ ಜನರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ (Electricity Connection) ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್‌ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹಳೆಯ 2000ರ ಮೇ 31 ರ ಒಳಗೆ ಕಟ್ಟಡ ಪೂರ್ಣಗೊಂಡು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ ಕಟ್ಟಡಗಳಿಗೆ ಆದೇಶ ಪ್ರಕಟವಾದ ದಿನದಿಂದ 15 ದಿನಗಳ ಒಳಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಏನೇನು ದಾಖಲೆ ನೀಡಬೇಕು?

ಅರ್ಜಿ ಸಲ್ಲಿಸುವವರು ಫಲಾನುಭವಿಗಳ ಫೋಟೋ, ಕಟ್ಟಡದ ಫೋಟೋ ಹಾಗೂ ಜಿಪಿಎಸ್‌ ಲೊಕೆಷನ್‌ ಜೊತೆಗೆ ಅರ್ಜಿ ಸಲ್ಲಿಸಬೇಕು. 31-05-2000 ನೇ ಇಸವಿಯೊಳಗೆ ಪೂರ್ಣಗೊಂಡ ಕಟ್ಟಡಗಳಿಗೆ ಮಾತ್ರ ಈ ಅವಕಾಶ ಇರಲಿದೆ. ಹೊಸದಾಗಿ ತರಾತುರಿಯಲ್ಲಿ ಕಟ್ಟಡ ಕಟ್ಟೋರಿಗೆ ಈ ರಿಯಾಯಿತಿ ಇರೋದಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ರೇಷ್ಮೆ ಹುಳು ಮನೆ, ಕೊಟ್ಟಿಗೆ, ಹೈನುಗಾರಿಕೆಗೆ ವಿನಾಯಿತಿ ನೀಡಲಾಗಿರುತ್ತದೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jun 20, 2026 03:55 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More