ಗೌರಿಹಬ್ಬದ ದಿನ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡ್ತೇವೆ-ಡಿಕೆ ಶಿವಕುಮಾರ್​

ಗೌರಿಹಬ್ಬದ ದಿನ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡ್ತೇವೆ-ಡಿಕೆ ಶಿವಕುಮಾರ್​

ಕಿರಣ್ ಹನುಮಂತ್​ ಮಾದಾರ್
|

Updated on: Sep 01, 2024 | 10:08 PM

ಬೆಂಗಳೂರಿನಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ‘ಎತ್ತಿನಹೊಳೆ ಯೋಜನೆಗೆ ಸೆ. 6 ಅಂದರೆ ಗೌರಿ ಗಣೇಶ ಹಬ್ಬದಂದು ಸಿಎಂ ಚಾಲನೆ ನೀಡಲಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ನೀರು ಹರಿಯಲಿದೆ ಎಂದು ಹೇಳಿದರು. ಈ ವೇಳೆ ಪಕ್ಷ ಭೇದ ಮರೆತು‌ ರೈತರಿಗೆ ಒಳ್ಳೆಯದಾಗಲಿ ಎಂದು ಒಗ್ಗೂಡಬೇಕು ಎಂದರು.

ಬೆಂಗಳೂರು, ಸೆ.01: ಸೆ. 6ರಂದು ಎತ್ತಿನಹೊಳೆ ಯೋಜನೆಗೆ ಸಿಎಂ ಚಾಲನೆ ನೀಡುತ್ತಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಗೌರಿಹಬ್ಬದ ದಿನ ಮಧ್ಯಾಹ್ನ 12.05ಕ್ಕೆ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡುತ್ತೇವೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ನೀರು ಹರಿಯಲಿದೆ. ಪಕ್ಷ ಭೇದ ಮರೆತು‌ ರೈತರಿಗೆ ಒಳ್ಳೆಯದಾಗಲಿ ಎಂದು ಒಗ್ಗೂಡಬೇಕು. ಈ ಬಗ್ಗೆ ನಿನ್ನೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ