AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ವಂಚಿತ ಬಿಜೆಪಿ ಸಂಸದರಿಗೆ ಗೋವಿಂದ ಗೋವಿಂದ ಎಂದು ಡಿಕೆ ಶಿವಕುಮಾರ್ ವ್ಯಂಗ್ಯ​

ಟಿಕೆಟ್ ವಂಚಿತ ಬಿಜೆಪಿ ಸಂಸದರಿಗೆ ಗೋವಿಂದ ಗೋವಿಂದ ಎಂದು ಡಿಕೆ ಶಿವಕುಮಾರ್ ವ್ಯಂಗ್ಯ​

ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 13, 2024 | 7:41 PM

Share

ಟಿಕೆಟ್ ವಂಚಿತ ಬಿಜೆಪಿ ಸಂಸದರಾದ ‘ಪ್ರತಾತ್ ಸಿಂಹ, ಡಿ.ವಿ.ಸದಾನಂದಗೌಡ ಸೇರಿದಂತೆ ಅನೇಕರಿಗೆ ಗೋವಿಂದ ಗೋವಿಂದ ಎನ್ನುವ ಮೂಲಕ ಡಿ.ಕೆ.ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮಾತನಾಡಿದ ಅವರು, ‘ಭಾರತೀಯ ಜನತಾ ಪಕ್ಷ 14 ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಯಾಕೆಂದರೆ ಅವರೆಲ್ಲರೂ ಸೋಲುತ್ತಾರೆ ಎಂದ ಮೊದಲೇ ಗೊತ್ತಿತ್ತು ಎಂದರು.

ಮೈಸೂರು, ಏ.13: ಟಿಕೆಟ್ ವಂಚಿತ ಬಿಜೆಪಿ ಸಂಸದರಾದ ‘ಪ್ರತಾತ್ ಸಿಂಹ, ಡಿ.ವಿ.ಸದಾನಂದಗೌಡ ಸೇರಿದಂತೆ ಅನೇಕರಿಗೆ ಗೋವಿಂದ ಗೋವಿಂದ ಎನ್ನುವ ಮೂಲಕ ಡಿ.ಕೆ.ಶಿವಕುಮಾರ್(DK Shivakumar) ವ್ಯಂಗ್ಯ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮಾತನಾಡಿದ ಅವರು, ‘ಭಾರತೀಯ ಜನತಾ ಪಕ್ಷ 14 ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಯಾಕೆಂದರೆ ಅವರೆಲ್ಲರೂ ಸೋಲುತ್ತಾರೆ ಎಂದ ಮೊದಲೇ ಗೊತ್ತಿತ್ತು. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೋರಾಟ ಮಾಡಿದ್ದ. ಬಿಜೆಪಿಯವರು ಯಾಕೆ ಪ್ರತಾಪ್ ಸಿಂಹಗೆ ಟಿಕೆಟ್ ಕೊಡಲಿಲ್ಲ, ಶೋಭಕ್ಕ ನೀನ್ ಹೋಗಕ್ಕ ಎಂದು ಹೊರಗಡೆ ಕಳುಹಿಸಿಬಿಟ್ಟರು.

ಅನಂತಕುಮಾರ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಅಂತಿದ್ದ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೂ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಈಶ್ವರಪ್ಪನನ್ನ ದೇವರೇ ಕಾಪಾಡಬೇಕು ಎಂದಿದ್ದಾರೆ. ಆದರೆ, ಕಾಂಗ್ರೆಸ್​ನವರು ಒಳ್ಳೆಯ ಅಭ್ಯರ್ಥಿಗಳಿಗೆ ಟಿಕೆಟ್ ಕೊಟ್ಟಿದ್ದೇವೆ. ರಾಜ್ಯದಲ್ಲಿ ಒಕ್ಕಲಿಗ ಸಮಾಜದವರಿಗೆ ಹೆಚ್ಚು ಟಿಕೆಟ್ ನೀಡಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More