AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರನ್ನು ಬೇಕಾದರೂ ಟೀಕಿಸಬಹುದು: ಡಿಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರನ್ನು ಬೇಕಾದರೂ ಟೀಕಿಸಬಹುದು: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 22, 2024 | 2:38 PM

Share

ರಾಜ್ಯದ ರಾಜಕಾರಣ ಯಾವ ಸ್ಥಿತಿ ತಲುಪಿದೆ ನೋಡಿ! ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪದಚ್ಯುತಗೊಳಿಸುವ ಮತ್ತು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿದ್ದರೆ, ಆಡಳಿತ ಪಕ್ಷದ ನಾಯಕರು ಮಾಡುವ ಕೆಲಸಗಳನ್ನು ಬಿಟ್ಟು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಉಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ! ರಾಜ್ಯದ ಸ್ಥಿತಿ ದೇವರಿಗೆ ಮಾತ್ರ ಪ್ರೀತಿ!

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಅವರನ್ನು ನಿಂದಿಸಿರುವುದನ್ನು ಅಗೌರವ ಸಲ್ಲಿಸಿದ್ದನ್ನು ಮತ್ತು ಟೀಕೆಗಳನ್ನು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದಾರಂತೆ ಅಂತ ಕೇಳಿದ್ದಕ್ಕೆ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರನ್ನು ಬೇಕಾದರೂ ಟೀಕಿಸಬಹುದು, ಘನವೆತ್ತ ರಾಜ್ಯಪಾಲರ ಬಗ್ಗೆ ನಮಗೆ ಗೌರವ ಇದೆ ಎಂದು ಹೇಳಿದರು. ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಏನಾದರೂ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆಯೇ ಎಂದು ಕೇಳಿದ ಪ್ರಶ್ನೆಗೆ ಅವರು ಸಭೆಯಲ್ಲಿ ಹಲವಾರು ವಿಷಯಗಳ ಮೇಲೆ ಚರ್ಚೆ ನಡೆಯಲಿದೆ, ಏನೇನಾಗುತ್ತೋ ಗೊತ್ತಿಲ್ಲ, ಸಭೆ ಮುಗಿದ ಬಳಿಕ ಗೊತ್ತಾಗಲಿದೆ ಎಂದು ಹೇಳಿದರು. ರಾಜ್ಯಪಾಲರು ಬುಲ್ಲೆಟ್ ಪ್ರೂಫ್ ಕಾರನ್ನು ಬಳಸುತ್ತಿರುವುದು ಕಾಂಗ್ರೆಸ್ ನಾಯಕರ ಕಾರಣಕ್ಕಾಗಿ ಅಲ್ಲ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕಿಡಿಗೇಡಿಗಳು ಕಾರಿನ ಮೇಲೆ ಕಲ್ಲು ತೂರಾಟ ನಡೆಸಬಹುದೆಂಬ ಶಂಕೆ ಇರುವುದರಿಂದ ಪೊಲೀಸರು ಅವರಿಗೆ ಬುಲ್ಲೆಟ್ ಪ್ರೂಫ್ ಕಾರು ನೀಡಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ