Karnataka Assembly Polls: ಮತದಾನದ ಬಳಿಕ ತಮ್ಮ ಹುಟ್ಟೂರಿನ ಬಗ್ಗೆ ಬಹಳ ಹೆಮ್ಮೆಯಿಂದ ಮಾತಾಡಿದ ಡಿಕೆ ಶಿವಕುಮಾರ್

Updated on: May 10, 2023 | 12:42 PM

ಕಾಂಗ್ರೆಸ್ ಪಕ್ಷ ಇತರ ಪಕ್ಷಗಳಂತೆ ಕೇವಲ ಭರವಸೆ ನೀಡುವ ಪಕ್ಷವಲ್ಲ, ನೀಡಿದ ಭರವಸೆಗಳನ್ನು ಈಡೇರಿಸುವ ಪಕ್ಷ ಎಂದು ಶಿವಕುಮಾರ್ ಹೇಳಿದರು.

ರಾಮನಗರ: ಡಿಕೆ ಶಿವಕುಮಾರ್ (DK Shivakumar) ತಮ್ಮ ಹುಟ್ಟೂರು ದೊಡ್ಡಲಹಳ್ಳಿಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ತೆರಳಿ ಮತ ಚಲಾಯಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ತಮ್ಮೂರಿನ ಬಗ್ಗೆ ಬಹಳ ಹೆಮ್ಮೆಯಿಂದ ಮಾತಾಡಿದರು. ರಾಜ್ಯದೆಲ್ಲೆಡೆ ಮತದಾನದ (voting) ಸಂಭ್ರಮ ನಡೆಯುತ್ತಿದೆ, ಬದಲಾವಣೆಯ ಗಾಳಿ ಬೀಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕಾಂಗ್ರೆಸ್ ಪಕ್ಷ ಇತರ ಪಕ್ಷಗಳಂತೆ ಕೇವಲ ಭರವಸೆ ನೀಡುವ ಪಕ್ಷವಲ್ಲ, ನೀಡಿದ ಭರವಸೆಗಳನ್ನು ಈಡೇರಿಸುವ ಪಕ್ಷ. ಪಕ್ಷದ ಚಿಹ್ನೆ ಹಸ್ತದಲ್ಲಿರುವ 5 ಬೆರಳುಗಳ ಸೂಚಕವಾಗಿ 5 ಗ್ಯಾರಂಟಿಗಳನ್ನು (guarantees) ನೀಡಿದ್ದೇವೆ, ಅವುಗಳನ್ನ ಈಡೇರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು. ರಾಜ್ಯದ ಮತದಾರರು ತಮ್ಮ ವಿವೇಕ, ವಿವೇಚನೆ ಮತ್ತು ಜ್ಞಾನ ಬಳಸಿ ಭ್ರಷ್ಟ ಸರ್ಕಾರವನ್ನು ಹೊಡೆದೋಡಿಸುವ ಪವಿತ್ರ ದಿನ ಇದಾಗಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More