‘ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಅವನ ಮಾತು ಕೇಳ್ಕೊಂಡು ಸುರಂಗ ಮಾರ್ಗ ಯೋಜನೆ ನಿಲ್ಲಿಸಲ್ಲ’: ಡಿಕೆ ಶಿವಕುಮಾರ್

Updated on: Oct 25, 2025 | 11:21 AM

ಡಿಸಿಎಂ ಡಿಕೆ ಶಿವಕುಮಾರ್ ಅವರು ಜನ ಸಂಪರ್ಕ ಸಭೆ ನಡೆಸಿ, ಹೊಸ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ಆಲಿಸಿದರು. ಲಾಲ್​ಬಾಗ್ ಸುರಂಗ ಮಾರ್ಗ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯಗೆ ಡಿಕೆಶಿ ಖಡಕ್ ಪ್ರತಿಕ್ರಿಯೆ ನೀಡಿದ್ದು, ವಿರೋಧಿಗಳ ಮಾತು ಕೇಳಿ ಯೋಜನೆ ನಿಲ್ಲಿಸುವುದಿಲ್ಲ. ಅವರ ಕಾಲದಲ್ಲಿ ಯಾವುದೇ ಉತ್ತಮ ಕೆಲಸ ಆಗಿಲ್ಲ ಎಂದು ಹೇಳಿದರು.

ಬೆಂಗಳೂರು, ಅಕ್ಟೋಬರ್ 25: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಲಾಲ್​ಬಾಗ್ ಸುರಂಗ ಮಾರ್ಗ ಯೋಜನೆಯ ವಿರೋಧದ ಕುರಿತು ಮಾತನಾಡಿ, ಯೋಜನೆಯಿಂದ ಲಾಲ್​ಬಾಗ್​ಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲಸದ ಅವಧಿಯಲ್ಲಿ ತಾತ್ಕಾಲಿಕವಾಗಿ ಒಂದು ಎಕರೆ ಪ್ರದೇಶವನ್ನು ಬಳಸಿಕೊಂಡು ನಂತರ ಪಾರ್ಕ್ ಆಗಿ ಮರುಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಸಂಸದ ತೇಜಸ್ವಿ ಸೂರ್ಯ ಅವರ ವಿರೋಧಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಒಳಗಡೆ ಸುರಂಗ ಮಾರ್ಗ ನಿರ್ಮಿಸುವುದು ಅನಿವಾರ್ಯ. ಮುಂಬೈ ಮತ್ತು ದೆಹಲಿಯಂತಹ ನಗರಗಳಲ್ಲಿಯೂ ಇಂತಹ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ವಿರೋಧಿಗಳ ಮಾತು ಕೇಳಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಜನರಿಗೋಸ್ಕರ ಕೆಲಸ ಮಾಡುತ್ತಿದ್ದೇವೆ ಎಂದರು. ತೇಜಸ್ವಿ ಸೂರ್ಯ ಅವರದ್ದು ಖಾಲಿ ಟ್ರಂಕ್ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ