ಅಧಿಕಾರ ಹಂಚಿಕೆ ಸೂತ್ರವೂ ಇಲ್ಲ ಏನೂ ಇಲ್ಲ, ಯಾರೂ ಆ ಬಗ್ಗೆ ಮಾತನಾಡುವಂತಿಲ್ಲ: ಡಿಕೆ ಶಿವಕುಮಾರ್

|

Updated on: Dec 07, 2024 | 3:33 PM

ಅಧಿಕಾರ ಹಂಚಿಕೆ ಕುರಿತು ತಾವು ನೀಡಿದ್ದ ಹೇಳಿಕೆಯಿಂದ ಸೃಷ್ಟಿಯಾದ ಗೊಂದಲಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಬೆಂಗಳೂರಿನಲ್ಲಿ ತೆರೆ ಎಳೆದಿದ್ದಾರೆ. ಅಧಿಕಾರ ಹಂಚಿಕೆ ಸೂತ್ರವೂ ಇಲ್ಲ ಏನೂ ಇಲ್ಲ, ಯಾರೂ ಆ ಬಗ್ಗೆ ಮಾತನಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ.

ಬೆಂಗಳೂರು, ಡಿಸೆಂಬರ್ 7: ಕೆಲವು ದಿನಗಳ ಹಿಂದಷ್ಟೇ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಈಗ ತದ್ವಿರುದ್ಧ ಹೇಳಿಕೆ ನೀಡಿದ್ದಾರೆ. ಆ ಕುರಿತು ಬೆಂಗಳೂರಿನಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರ ಹಂಚಿಕೆ ಸೂತ್ರವೂ ಇಲ್ಲ ಏನೂ ಇಲ್ಲ. ಯಾರೂ ಆ ಬಗ್ಗೆ ಬಹಿರಂಗವಾಗಿ ಮಾತನಾಡುವಂತಿಲ್ಲ. ರಾಜಕೀಯವಾಗಿ ನಮ್ಮ ನಡುವೆ ಒಂದಷ್ಟು ಹೊಂದಾಣಿಕೆಗಳಿವೆ. ಅದರ ಪ್ರಕಾರ ಆಡಳಿತ ಮಾಡಿಕೊಂಡು ಹೋಗುತ್ತಿದ್ದೇವೆ ಎಂದರು.

ಅಧಿಕಾರ ಹಂಚಿಕೆ ಸೂತ್ರ ವಿಚಾರವಾಗಿ ಗೊಂದಲಗಳಿಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಆ ರೀತಿ ಯಾವುದೇ ಒಪ್ಪಂದ ಆಗಿಲ್ಲ ಎಂದಿದ್ದಾರೆ. ಅದೇ ಅಂತಿಮ, ಅಲ್ಲಿಗೆ ಆ ಚರ್ಚೆ ಮುಗಿಯಿತು ಎಂದು ಅವರು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Dec 07, 2024 03:30 PM