Assembly Polls: ಸಿದ್ದರಾಮಯ್ಯ ಮತ್ತು ಮುನಿಯಪ್ಪ ನಡುವಿನ ಮುನಿಸಿಗೆ ಡಿಕೆ ಶಿವಕುಮಾರ್ ತೇಪೆ ಹಾಕುವಲ್ಲಿ ಸಫಲರಾದರೇ?

ಅರುಣ್​ ಕುಮಾರ್​ ಬೆಳ್ಳಿ

Updated on: Feb 03, 2023 | 2:59 PM

ಹಿಂದೆ, ಅವರು ಸಿದ್ದರಾಮಯ್ಯ ಕೋಲಾರಕ್ಕೆ ಹೋಗುವುದನ್ನು ವಿರೋಧಿಸಿದ್ದರು ಮತ್ತು ಅದೇ ಅಸಮಾಧಾನದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ.

ಕೋಲಾರ:  ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಸಿದ್ದರಾಮಯ್ಯ (Siddaramaiah) ಮತ್ತು ಕೆಹೆಚ್ ಮುನಿಯಪ್ಪ (KH Muniyappa) ನಡುವಿನ ಮುನಿಸನ್ನು ದೂರ ಮಾಡುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಯಶ ಕಂಡಂತಿದೆ. ಕೋಲಾರದಲ್ಲಿ ಇಂದು ಮುನಿಯಪ್ಪನವರು ಮಾಧ್ಯಮದವರೊಂದಿಗೆ ಮಾತಾಡುವಾಗ ಮುನಿಯಪ್ಪ, ಸಿದ್ದರಾಮಯ್ಯ ಕೋಲಾರದಿಂದ ಸ್ಫರ್ಧಿಸಲು ನಿರ್ಧರಿಸಿರುವುದಕ್ಕೆ ಸ್ವಾಗತ ಬಯಸಿದ್ದೇನೆ ಎಂದು ಹೇಳಿ ಮಾಧ್ಯಮದವರನ್ನು ಚಕಿತಗೊಳಿಸಿದರು. ಹಿಂದೆ, ಅವರು ಸಿದ್ದರಾಮಯ್ಯ ಕೋಲಾರಕ್ಕೆ ಹೋಗುವುದನ್ನು ವಿರೋಧಿಸಿದ್ದರು ಮತ್ತು ಅದೇ ಅಸಮಾಧಾನದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ ಶುಕ್ರವಾರ ಅವರ ವರಸೆ ಬದಲಾಗಿತ್ತು ಮತ್ತು ಯಾತ್ರೆಯಲ್ಲೂ ಸಕ್ರಿಯವಾಗಿ ಭಾಗವಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 03, 2023 02:58 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.