ಡಿಕೆ ಶಿವಕುಮಾರ್ ಸಿಎಂ ಆಗಬೇಕು, ರಾಮನಗರದಲ್ಲಿ ಬೆಂಬಲಿಗರಿಂದ ಪ್ರತಿಭಟನೆ
ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿ ರಾಮನಗರದ ಐಜೂರು ವೃತ್ತದಲ್ಲಿ ಬೆಂಬಲಿಗರಿಂದ ಬುಧವಾರ ಪ್ರತಿಭಟನೆ ಮಾಡಿದ್ದಾರೆ.
ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಬಹುಮತ ಪಡೆದುಕೊಂಡು ಇಂದಿಗೆ ಮೂರು ದಿನ ಕಳೆದರೂ ಮುಖ್ಯಮಂತ್ರಿ ಯಾರಾಗಬೇಕು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ನಾಯಕರು ಮೊಕ್ಕಾಂ ಹೂಡಿದ್ದಾರೆ. ಇತ್ತ ಜಿಲ್ಲೆ ಜಿಲ್ಲೆಯಲ್ಲೂ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ (DK Shivakumar) ಪರ ಶಾಸಕರು ಕಹಳೆ ಮೊಳಗಿಸುತ್ತಿದ್ದಾರೆ. ಅದೇ ರೀತಿಯಾಗಿ ಇಬ್ಬರ ನಾಯಕರ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ನಾಯಕನಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿ ರಾಮನಗರದ ಐಜೂರು ವೃತ್ತದಲ್ಲಿ ಬೆಂಬಲಿಗರಿಂದ ಬುಧವಾರ ಪ್ರತಿಭಟನೆ ಮಾಡಿದ್ದಾರೆ. ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 17, 2023 08:45 PM
Latest Videos