Who would be CM? ಡಿಕೆ ಶಿವಕುಮಾರ್ ಮಾಡಿರುವ ತ್ಯಾಗ ಮತ್ತು ಪಟ್ಟ ಪರಿಶ್ರಮಕ್ಕೆ ಪ್ರತಿಫಲ ಸಿಗಬೇಕು: ಡಿಕೆ ಸುರೇಶ್
ಶಿವಕುಮಾರ್ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು ಎಂದು ಸಂಸದ ಡಿಕೆ ಸುರೇಶ್ ದೆಹಲಿಯಲ್ಲಿ ಹೇಳಿದರು.
ದೆಹಲಿ: ಡಿಕೆ ಶಿವಕುಮಾರ್ (DK Shivakumar) ಅವರು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ; ಊಟ ನಿದ್ರೆ, ಕುಟುಂಬ, ವ್ಯವಹಾರ ಎಲ್ಲವನ್ನು ಬದಿಗೊತ್ತಿ ರಾಜ್ಯದಲ್ಲಿ ಪಕ್ಷಕ್ಕೆ 135 ಸ್ಥಾನಗಳನ್ನು ತಂದುಕೊಟ್ಟಿದ್ದಾರೆ, ಹಾಗಾಗಿ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು ಎಂದು ಅವರ ಸಹೋದರ ಮತ್ತು ಸಂಸದ ಡಿಕೆ ಸುರೇಶ್ (DK Suresh) ದೆಹಲಿಯಲ್ಲಿ ಹೇಳಿದರು. ದೆಹಲಿಯ ತಮ್ಮ ನಿವಾಸದಲ್ಲಿ ಬೆಳಗ್ಗೆ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದ ಬಳಿಕ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳವರೆಗೆ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿರಲಿ, ಅಲ್ಲಿಯವರೆಗೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿರಲಿ ಅಂತ ಹೈಕಮಾಂಡ್ ಹೇಳಿದರೆ ಒಪ್ಪಿಕೊಳ್ಳುತ್ತೀರಾ ಅಂತ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ