ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಡಿಕೆ ಶಿವಕುಮಾರ್ ಕಪಾಳಮೋಕ್ಷ

|

Updated on: May 05, 2024 | 1:28 PM

ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್​ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ. ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್​ ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈಹಾಕಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಡಿಕೆ ಶಿವಕುಮಾರ್ ಮುಖಂಡನ ಕಪಾಳಕ್ಕೆ ಹೊಡೆದಿದ್ದಾರೆ.

ಹಾವೇರಿ, ಮೇ 05: ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್​ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಕಪಾಳಮೋಕ್ಷ (slap) ಮಾಡಿದ್ದಾರೆ. ನಿನ್ನೆ ರಾತ್ರಿ ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಸದ್ಯ ಡಿಕೆ ಶಿವಕುಮಾರ್​ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್​ ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈಹಾಕಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಡಿಕೆ ಶಿವಕುಮಾರ್ ಮುಖಂಡನ ಕಪಾಳಕ್ಕೆ ಹೊಡೆದಿದ್ದಾರೆ. ವಿಡಿಯೋ ನೋಡಿ.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on